ಕನ್ನಡಪ್ರಭ ವಾರ್ತೆ ವಿಜಯಪುರ

ಮಳೆ ಬರುತ್ತಿದ್ದಾಗ ಪಾನ್‌ ಶಾಪ್‌ ಬಳಿ ನಿಂತಿದ್ದ ವೇಳೆ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿ ಮೂವರು ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.

ಗ್ರಾಮದ ರವಿಕಿರಣ ಪಾಟೀಲ ಎಂಬುವವರಿಗೆ ಸೇರಿದ ಪಾನ್‌ಶಾಪ್‌ನಲ್ಲಿ ಸ್ಫೋಟ ಸಂಭವಿಸಿದೆ. ಪಾನ್‌ಶಾಪ್‌ನಲ್ಲಿದ್ದ ವಿಜಯಕುಮಾರ, ಹೊರಗಡೆ ನಿಂತಿದ್ದ ಪ್ರಶಾಂತ ಹಾಗೂ ಸಿದ್ದು ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಫೋಟದಿಂದ ಪಾನಶಾಪ್‌ನಲ್ಲಿದ್ದ ಫ್ರಿಡ್ಜ್‌ಗೆ ಯಾವುದೇ ಹಾನಿಯಾಗಿಲ್ಲ. ಹೊರಗಡೆಯಿಂದ ಸ್ಫೋಟವಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಬಲೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಹಾಗೂ ಸೊಕೋ ತಂಡದ ಶ್ವಾನ ದಳದಿಂದ ಪರೀಕ್ಷೆ ಮಾಡಲಾಗಿದೆ. ಆದರೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ರಾತ್ರಿ ಮಳೆಯಾಗುತ್ತಿರುವುದರಿಂದ ಈ ವೇಳೆ ಸಿಡಿದು ಬಡೆದಿರಬಹುದು ಎಂದು ಶಂಕಿಸಲಾಗಿದೆ. ತನಿಖೆ ಮುಂದುವರೆದಿದ್ದು, ತನಿಖೆ ಬಳಿಕವೇ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.