ಸಾರಾಂಶ
ಕಾರ್ಖಾನೆ ಸಂಪೂರ್ಣವಾಗಿ ನಷ್ಟದಲ್ಲಿ ಮುಳುಗಿ ಮುಚ್ಚಿ ಹೋಗುವ ಹಂತ ತಲುಪುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿ ಮನವಿ ಮಾಡಿ ಕಾರ್ಖಾನೆ ಪುನಶ್ಚೇತನಕ್ಕೆ ₹50 ಕೋಟಿ ಬಿಡುಗಡೆ ಮಾಡಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಡ್ಯ ಜಿಲ್ಲೆಯ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾದ ಮೈಶುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡಲಾಗುತ್ತಿದೆ ಎಂಬುದು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿರುವ ಅಪಪ್ರಚಾರ. ಇದಕ್ಕೆ ರೈತರು, ಸಾರ್ವಜನಿಕರು ಕಿವಿಗೊಡಬಾರದು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.ರಾಜ್ಯದಲ್ಲಿರುವ 72 ಸಕ್ಕರೆ ಕಾರ್ಖಾನೆಗಳಲ್ಲಿ ಮೈಶುಗರ್ ಮಾತ್ರ ಸರ್ಕಾರಿ ಸ್ವಾಮ್ಯದ ಕಾರ್ಖಾನೆ. ಯಾವುದೇ ಕಾರಣಕ್ಕೂ ಕಾರ್ಯಾನೆಯನ್ನು ಖಾಸಗೀಕರಣ ಮಾಡುವುದಿಲ್ಲ. ಸರ್ಕಾರ ರೈತರ ಹಿತ ಕಾಯಲು ಬದ್ಧವಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾರ್ಖಾನೆ ಸಂಪೂರ್ಣವಾಗಿ ನಷ್ಟದಲ್ಲಿ ಮುಳುಗಿ ಮುಚ್ಚಿ ಹೋಗುವ ಹಂತ ತಲುಪುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿ ಮನವಿ ಮಾಡಿ ಕಾರ್ಖಾನೆ ಪುನಶ್ಚೇತನಕ್ಕೆ ₹50 ಕೋಟಿ ಬಿಡುಗಡೆ ಮಾಡಿಸಲಾಗಿತ್ತು.ಕಳೆದ ಹಂಗಾಮಿನಲ್ಲಿ 2.05 ಲಕ್ಷ ಟನ್ ಹಾಗೂ ಈ ವರ್ಷ 2.01 ಲಕ್ಷ ಟನ್ ಅರೆದಿದ್ದು ಎಲ್ಲ ರೈತರಿಗೆ ಪೂರ್ಣ ಬಿಲ್ ಪಾವತಿಸಲಾಗಿದೆ. ಕಳೆದ 20 ವರ್ಷಗಳಿಂದ ಬಾಕಿ ಇದ್ದ ₹52.25 ಕೋಟಿ ವಿದ್ಯುತ್ ಬಿಲ್ ಬಾಕಿಯನ್ನು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಮನ್ನಾ ಮಾಡಿದ್ದಾರೆ. ಖಾಸಗೀಕರಣ ಮಾಡುವಂತಹ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿಯಾಗಲು ಹೆಮ್ಮಿಗೆ ಕಾಳೇಗೌಡ ಲಾಭಿಮಂಡ್ಯ:
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹೆಮ್ಮಿಗೆ ಕಾಳೇಗೌಡ ಅವರು ಹರಸಾಹಸ ನಡೆಸುತ್ತಿದ್ದಾರೆ. ಪಕ್ಷದ ಬೆಂಬಲಿಗರು, ಮುಖಂಡರೊಂದಿಗೆ ಪ್ರಚಾರದಲ್ಲಿ ತೊಡಗಿರುವ ಕಾಳೇಗೌಡ ಅವರು ಪಕ್ಷದ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. ಚುನಾವಣೆ ಫೆ.೨ರಂದು ನಿಗದಿಯಾಗಿದ್ದು, ಜ.೧೮ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ. ಹೆಮ್ಮಿಗೆ ಕಾಳೇಗೌಡ ಅವರು ತಮ್ಮೊಬ್ಬರ ಪರವಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಮಂಡ್ಯ ತಾಲೂಕು ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘದವರನ್ನು ಭೇಟಿಯಾಗಿ ಬೆಂಬಲ ಕೋರುತ್ತಿದ್ದಾರೆ.