ದಸರಾ ನಾಡಿನ ಸಾಂಸ್ಕೃತಿಕ ಶ್ರೀಮಂತಿಕೆ, ಧಾರ್ಮಿಕ ಪರಂಪರೆ ಮತ್ತು ಐತಿಹಾಸಿಕ ಪರಂಪರೆಯ ಪ್ರತೀಕವಾಗಿದೆ. ಹಲವು ಶತಮಾನಗಳ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ಈ ಮಹೋತ್ಸವವು ರಾಜ್ಯದ ಜನರನ್ನು ಒಗ್ಗೂಡಿಸುವುದರ ಜತೆಗೆ ನಾಡಿನ ಏಕತೆ, ಸೌಹಾರ್ದ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರುತ್ತದೆ ಎಂದು ಮುಜರಾಯಿ ಖಾತೆ ಸಚಿವ ಕೆ.ಎಸ್.ಬಸವಂತಪ್ಪ ಅಭಿಪ್ರಾಯಪಟ್ಟಿದ್ದಾರೆ.

- ರೈತರ ಸಮೃದ್ಧಿ, ನಾಡಿನ ಸುಭಿಕ್ಷೆಗಾಗಿ ಪ್ರಾರ್ಥನೆ: ಮುಜರಾಯಿ ಸಚಿವ - - -

ದಾವಣಗೆರೆ: ದಸರಾ ನಾಡಿನ ಸಾಂಸ್ಕೃತಿಕ ಶ್ರೀಮಂತಿಕೆ, ಧಾರ್ಮಿಕ ಪರಂಪರೆ ಮತ್ತು ಐತಿಹಾಸಿಕ ಪರಂಪರೆಯ ಪ್ರತೀಕವಾಗಿದೆ. ಹಲವು ಶತಮಾನಗಳ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ಈ ಮಹೋತ್ಸವವು ರಾಜ್ಯದ ಜನರನ್ನು ಒಗ್ಗೂಡಿಸುವುದರ ಜತೆಗೆ ನಾಡಿನ ಏಕತೆ, ಸೌಹಾರ್ದ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರುತ್ತದೆ ಎಂದು ಮುಜರಾಯಿ ಖಾತೆ ಸಚಿವ ಕೆ.ಎಸ್.ಬಸವಂತಪ್ಪ ಅಭಿಪ್ರಾಯಪಟ್ಟರು.

ಮೈಸೂರು ದಸರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ನಾಡಿನ ಪರಂಪರೆ, ಸಂಸ್ಕೃತಿ, ಕಲೆ, ಸಾಹಿತ್ಯ ಹಾಗೂ ಐತಿಹಾಸಿಕ ವೈಭವವನ್ನು ಜಗತ್ತಿಗೆ ಪರಿಚಯಿಸುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶುಭ ಧನುರ್ ಲಗ್ನದಲ್ಲಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಪೂಜೆಯೊಂದಿಗೆ ವಿದ್ಯುಕ್ತ ಚಾಲನೆ ದೊರೆತಿದೆ. ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ ಎಂದರು.

ದಸರಾ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾದ ಹಬ್ಬವಲ್ಲ. ಇದು ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ ಸಂಸ್ಕೃತಿ ಹಾಗೂ ಪರಂಪರೆ ಅನಾವರಣಗೊಳಿಸುವ ಮಹತ್ವದ ವೇದಿಕೆಯಾಗಿದೆ. ದೇಶ-ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುವ ಮೈಸೂರು ದಸರಾ, ಕರ್ನಾಟಕದ ಸಾಂಸ್ಕೃತಿಕ ಗುರುತನ್ನು ಜಾಗತಿಕ ಮಟ್ಟದಲ್ಲಿ ಪ್ರತಿಬಿಂಬಿಸುತ್ತದೆ. ನಾಡಿನ ಭವ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿಯೂ ಈ ಉತ್ಸವ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಮಠಾಧೀಶರು ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಿದ್ದರು.

- - -

-12ಕೆಡಿವಿಜಿ32, 33:

ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಜರಾಯಿ ಇಲಾಖೆ ಸಚಿವ ಕೆ.ಎಸ್.ಬಸವಂತಪ್ಪ ಅವರನ್ನು ಸನ್ಮಾನಿಸಲಾಯಿತು.