ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗ ಡಾ. ದಿಲೀಷ್ ಶಶಿ ಅವರ ಮಾರ್ಗದರ್ಶನ ಮತ್ತು ಯೋಜನಾ ನಿರ್ದೇಶಕ ಕರೀಂ ಅಸದಿ ಅವರ ಮೇಲುಸ್ತುವಾರಿಯಲ್ಲಿ ಖಾಗ್ರಾ ತಂಡದ ಅವಿರತ ಪ್ರಯತ್ನದ ಫಲವಾಗಿ ಈ ಸ್ತಬ್ಧಚಿತ್ರ ರೂಪುಗೊಂಡಿತ್ತು.
ಕಾರವಾರ:
ಮೈಸೂರು ದಸರಾ ಮಹೋತ್ಸವ 2026ರ ಅಂಗವಾಗಿ ನಡೆದ ಜಂಬೂಸವಾರಿ ಮೆರವಣಿಗೆಯಲ್ಲಿ ಬೆಳಗಾವಿ ವಿಭಾಗದಲ್ಲಿ ಉತ್ತರ ಕನ್ನಡ ಜಿಪಂ ವತಿಯಿಂದ ಪ್ರದರ್ಶನಗೊಂಡ ಸಾಂಪ್ರದಾಯಿಕ ಕಲೆ ಮತ್ತು ಪ್ರಕೃತಿ ಸೌಂದರ್ಯ ಎಂಬ ಶೀರ್ಷಿಕೆಯಡಿಯ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಲಭಿಸಿದೆ. ಈ ಸ್ತಬ್ಧಚಿತ್ರದಲ್ಲಿ ಜಿಲ್ಲೆಯ ಪ್ರಸಿದ್ಧ ಕಾಳಿ ಹುಲಿ ಸಂರಕ್ಷಿತ ಅರಣ್ಯ, ಯಾಣ, ಜಿಲ್ಲೆಯ ಸ್ಥಳೀಯ ಬುಡಕಟ್ಟು ಸಮುದಾಯಗಳ ಸಂಸ್ಕೃತಿ ಹಾಗೂ ಪ್ರವಾಸಿ ತಾಣಗಳನ್ನು ಅತ್ಯಂತ ಆಕರ್ಷಕವಾಗಿ ಬಿಂಬಿಸಲಾಗಿತ್ತು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗ ಡಾ. ದಿಲೀಷ್ ಶಶಿ ಅವರ ಮಾರ್ಗದರ್ಶನ ಮತ್ತು ಯೋಜನಾ ನಿರ್ದೇಶಕ ಕರೀಂ ಅಸದಿ ಅವರ ಮೇಲುಸ್ತುವಾರಿಯಲ್ಲಿ ಖಾಗ್ರಾ ತಂಡದ ಅವಿರತ ಪ್ರಯತ್ನದ ಫಲವಾಗಿ ಈ ಸ್ತಬ್ಧಚಿತ್ರ ರೂಪುಗೊಂಡಿದ್ದು, ಜಿಲ್ಲೆಯ ಪ್ರಾಕೃತಿಕ ಸೌಂದರ್ಯ ಮತ್ತು ಬುಡಕಟ್ಟು ಸಮುದಾಯದ ಕಲೆ, ಸಂಸ್ಕೃತಿಯನ್ನು ಅರ್ಥಪೂರ್ಣವಾಗಿ ಪ್ರತಿಬಿಂಬಿಸುವಲ್ಲಿ ಯಶಸ್ವಿಯಾಗಿದೆ.ಕಾರವಾರ ಜಿಲ್ಲೆ ಎಂದು ಮರುನಾಮಕರಣಕ್ಕೆ ಗಣಪತಿ ಮಾಂಗ್ರೆ ಒತ್ತಾಯ
ಕಾರವಾರ: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವ ಹಿನ್ನೆಲೆ, ಉತ್ತರ ಕನ್ನಡ ಜಿಲ್ಲೆಗೂ ‘ಕಾರವಾರ ಜಿಲ್ಲೆ’ ಎಂದು ಮರುನಾಮಕರಣ ಮಾಡಬೇಕು ಎಂದು ಮೀನುಗಾರ ಮುಖಂಡ ಹಾಗೂ ಕಾಂಗ್ರೆಸ್ ಮೀನುಗಾರ ಸಂಘಟನೆಯ ಅಧ್ಯಕ್ಷ ಗಣಪತಿ ಮಾಂಗ್ರೆ ಒತ್ತಾಯಿಸಿದ್ದಾರೆ.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರವಾರವು ಜಿಲ್ಲೆಯ ಪ್ರಮುಖ ಆಡಳಿತಾತ್ಮಕ ಕೇಂದ್ರವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆಯೆಂದು ಹೆಸರಿಡಲು ನಿರ್ಧರಿಸಿರುವ ಮಾದರಿಯಲ್ಲೇ ಉತ್ತರ ಕನ್ನಡ ಜಿಲ್ಲೆಗೂ ಕಾರವಾರ ಜಿಲ್ಲೆ ಎಂದು ನಾಮಕರಣ ಮಾಡಬೇಕು ಎಂದು ಅಭಿಪ್ರಾಯಪಟ್ಟರು.ವಿವಿಧ ಯೋಜನೆಗಳಿಂದಾಗಿ ಈಗಾಗಲೇ ಉತ್ತರ ಕನ್ನಡ ಜಿಲ್ಲೆ ತತ್ತರಿಸಿದ್ದು, ಜನರ ವಿರೋಧದ ನಡುವೆಯೂ ಯೋಜನೆಗಳನ್ನು ಹೇರುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಜಿಲ್ಲೆಗೆ ಕಾರವಾರ ಎಂದು ಮರುನಾಮಕರಣ ಮಾಡುವ ಮೂಲಕ ಆಡಳಿತಾತ್ಮಕವಾಗಿಯೂ ಕಾರವಾರಕ್ಕೆ ಹೆಚ್ಚಿನ ಮಹತ್ವ ಸಿಗುವಂತಾಗಬೇಕು. ಇದರಿಂದ ಜಿಲ್ಲೆಯ ಗುರುತಿಗೂ ಮಹತ್ವ ದೊರೆಯಲಿದೆ ಎಂದು ಅವರು ಹೇಳಿದರು.
ಆದರೆ, ಉತ್ತರ ಕನ್ನಡ ಜಿಲ್ಲೆಯನ್ನು ಕಾರವಾರ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಇತರ ಮೀನುಗಾರ ಮುಖಂಡರು ಬೆಂಬಲ ವ್ಯಕ್ತಪಡಿಸಿಲ್ಲ. ಇದು ಗಣಪತಿ ಮಾಂಗ್ರೆ ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಮೀನುಗಾರ ಸಮುದಾಯದ ಒಮ್ಮತದ ನಿರ್ಧಾರವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.