ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಪುರಾಣ ಪ್ರಸಿದ್ಧವಾದ ಶ್ರೀಲಕ್ಷ್ಮೀನಾರಾಯಣಸ್ವಾಮಿ ದೇವಾಲಯದ ವಾರ್ಷಿಕೋತ್ಸವದ ಅಂಗವಾಗಿ ಕಲ್ಯಾಣೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು.ಟಿ.ನರಸೀಪುರದ ಗುಂಜಾ ನರಸಿಂಹಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀಧರಭಟ್ಟ, ಸಾಂಸ್ಕೃತಿಕ ಸಂಘಟಕ ನಾರಾಯಣ ಆಚಾರ್ಯ ಹಾಗೂ ಅರಸೀಕೆರೆ ಮಾಲೆಕಲ್ ತಿರುಪತಿ ದೇವಾಲಯದ ಪ್ರಧಾನ ಅರ್ಚಕ ಶ್ರೀನಿವಾಸಾಚಾರ್ ಕಲ್ಯಾಣೋತ್ಸವದ ನೇತೃತ್ವ ವಹಿಸಿದ್ದರು.
ಪ್ರಧಾನ ಅರ್ಚಕ ಶ್ರೀನಿವಾಸಾಚಾರ್ ಮಾತನಾಡಿ, ಇಂದಿನ ಒತ್ತಡದ ಜೀವನದಲ್ಲಿ ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿಯು ದೊರೆಯುವ ಜೊತೆಗೆ ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಕೂಡ ಪಡೆಬಹುದು ಎಂದರು.ನಮ್ಮ ಸಂಸ್ಕೃತಿ ಪ್ರತಿಬಿಂಬವಾಗಿರುವ ದೇವಾಲಯಗಳ ಸಂರಕ್ಷಣೆ ಕರ್ತವ್ಯವಾಗಬೇಕು. ಶಿಥಿಲವಾಗಿದ್ದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯವನ್ನು ಹೊಸದಾಗಿ ಭಕ್ತರ ಸಹಕಾರದಿಂದ ಕಲ್ಲಿನಿಂದಲೇ ನಿರ್ಮಾಣ ಮಾಡಿ ಲೋಕಾರ್ಪಣೆ ಮಾಡಿ ಒಂದು ವರ್ಷ ಸಂಪೂರ್ಣವಾಗಿರುವುದರಿಂದ ಕಲ್ಯಾಣೋತ್ಸವ ನಡೆಸಿ ಶ್ರೀಲಕ್ಷ್ಮಿ ಹಾಗೂ ಪದ್ಮವತಿ ಅಮ್ಮನವರ ಕಲ್ಯಾಣ ಮಾಡಿ ಲೋಕ ಕಲ್ಯಾಣ ಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ಹೇಳಿದರು.ಇಂದು ಪತ್ರಿಕಾ ದಿನಾಚರಣೆ, ವಿಶೇಷ ಉಪನ್ಯಾಸ ಕಾರ್ಯಕ್ರಮ
ಮಂಡ್ಯ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಆ.23ರಂದು ಪತ್ರಿಕಾ ದಿನಾಚರಣೆ ಹಾಗೂ ಮಾಧ್ಯಮ ಕ್ಷೇತ್ರದ ಸವಾಲುಗಳು ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ಮಂಡ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಬೆಂಗಳೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮತ್ತೀಕೆರೆ ಜಯರಾಂ ಉದ್ಘಾಟಿಸುವರು. ಜಿಲ್ಲಾ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್ ಅಧ್ಯಕ್ಷತೆ ವಹಿಸುವರು. ಪ್ರತಿನಿಧಿ ಪತ್ರಿಕೆ ಪ್ರಧಾನ ಸಂಪಾದಕ ಸಿ.ಕೆ ಮಹೇಶ್ ಉಪನ್ಯಾಸ ನೀಡಲಿದ್ದಾರೆ.ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಮಹಿಳಾ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಡಾ.ಹೇಮಲತಾ ಕೆ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಎಚ್.ಎಸ್ ಶಿವರಾಜು ಭಾಗವಹಿಸಲಿದ್ದಾರೆ.ಆಗಸ್ಟ್ 26 ರಂದು ದಿಶಾ ಸಭೆ
ಮಂಡ್ಯ: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ ಸಭೆ)ಯನ್ನು ಆಗಸ್ಟ್ 26 ರಂದು ಬೆಳಗ್ಗೆ 11.30 ಗಂಟೆಗೆ ಜಿಲ್ಲಾ ಪಂಚಾಯತ್‍ನ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಶೇಖ್ ತನ್ವಿರ್ ಅಸಿಫ್ ತಿಳಿಸಿದ್ದಾರೆ.ಆ.26 ರಂದು ಶ್ರೀ ಕೃಷ್ಣ ಜಯಂತಿಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ಆ.26 ರಂದು ಶ್ರೀ ಕೃಷ್ಣ ಜಯಂತಿಯನ್ನು ವಿದ್ಯಾನಗರದ ಶ್ರೀ ಶಾರದ ಚಂದ್ರಮೌಳೇಶ್ವರ ಪ್ರಾರ್ಥನಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.