ನಾಪೋಕ್ಲುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಶ್ರೇಣಿ

| Published : Feb 26 2025, 01:01 AM IST

ಸಾರಾಂಶ

ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ರಾಷ್ಟ್ರೀಯ ಮೌಲ್ಯಮಾಪನ ಹಾಗೂ ಮಾನ್ಯತಾ ಮಂಡಳಿಯಿಂದ ನಡೆದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಬಿ ಪ್ಲಸ್‌ ಪ್ಲಸ್‌ ಶ್ರೇಣಿ ಪಡೆದುಕೊಂಡಿದೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಮೌಲ್ಯಮಾಪನ ಹಾಗೂ ಮಾನ್ಯತಾ ಮಂಡಳಿಯಿಂದ (NAAC ) ನವಂಬರ್ 2024ರಲ್ಲಿ ನಡೆದ ಕಾಲೇಜಿನ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ B++ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉತ್ತಮ ಶ್ರೇಣಿಯಾದ B ++ ಪಡೆದು ಕೊಡಗು ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲೇ ಉತ್ತಮ ಶ್ರೇಣಿ ಪಡೆದ ಪ್ರಥಮ ದರ್ಜೆ ಕಾಲೇಜಾಗಿದೆ ಎಂದು ಪ್ರಾಂಶುಪಾಲರಾದ ಮನೋಜ್ ಕುಮಾರ್ ಅವರು ತಿಳಿಸಿದರು.

ಕಾಲೇಜು ಅಭಿವೃದ್ಧಿ ಮಂಡಳಿ ಹಾಗೂ ಸಿಬ್ಬಂದಿ ವರ್ಗದ ಸಂಪೂರ್ಣ ಸಹಕಾರದಿಂದ ಈ ಉತ್ತಮ ಶ್ರೇಣಿಗೆ ಗೌರವ ಪಡೆಯಲು ಸಾಧ್ಯವಾಗಿದೆ ಎಂದು ತಿಳಿಸಿ ಸ್ಮರಿಸಿಕೊಂಡರು.