ಕನ್ನಡ ನಾಡು-ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯವನ್ನು ಸಂಗೀತದ ಮೂಲಕ ಜನರಿಗೆ ತಲುಪಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ನೋಂದಾಯಿತವಾಗಿರುವ ‘ನಾದ ನಂದನಂ’ ಸಂಸ್ಥೆಯ ಪ್ರಥಮ ಭಜನಾ-ಸಂಕೀರ್ತನೋತ್ಸವ ಹಾಗೂ ಉದ್ಘಾಟನಾ ಸಮಾರಂಭ ಅ.೪ರಂದು ಸಂಜೆ ೫ಕ್ಕೆ ನಗರದ ಉರ್ವಸ್ಟೋರ್‌ನ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಲಹೆಗಾರ ಪ್ರದೀಪ ಕುಮಾರ ಕಲ್ಕೂರ ತಿಳಿಸಿದರು.
ಮಂಗಳೂರು ; ಕನ್ನಡ ನಾಡು-ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯವನ್ನು ಸಂಗೀತದ ಮೂಲಕ ಜನರಿಗೆ ತಲುಪಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ನೋಂದಾಯಿತವಾಗಿರುವ ‘ನಾದ ನಂದನಂ’ ಸಂಸ್ಥೆಯ ಪ್ರಥಮ ಭಜನಾ-ಸಂಕೀರ್ತನೋತ್ಸವ ಹಾಗೂ ಉದ್ಘಾಟನಾ ಸಮಾರಂಭ ಅ.೪ರಂದು ಸಂಜೆ ೫ಕ್ಕೆ ನಗರದ ಉರ್ವಸ್ಟೋರ್‌ನ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಲಹೆಗಾರ ಪ್ರದೀಪ ಕುಮಾರ ಕಲ್ಕೂರ ತಿಳಿಸಿದರು.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕವನ್ನು ಕೇಂದ್ರವಾಗಿರಿಸಿಕೊಂಡು ರೂಪುಗೊಂಡಿರುವ ‘ನಾದ ನಂದನಂ’ ಸಂಸ್ಥೆಯ ಮೊದಲ ಕಾರ್ಯಕ್ರಮದಲ್ಲಿ ಭಕ್ತಿ ಗೀತೆ, ಭಾವಗೀತೆ, ಜಾನಪದ ಗೀತೆ, ಚಲನಚಿತ್ರ ಗೀತೆಗಳೊಂದಿಗೆ ಪುರಂದರದಾಸ, ಕನಕದಾಸ, ಬಸವಣ್ಣ ಹಾಗೂ ಶರಣರ ತತ್ವಪದಗಳನ್ನು ವಿವಿಧ ಸಂಗೀತ ಪ್ರಕಾರಗಳಲ್ಲಿ ಪ್ರಸ್ತುತಪಡಿಸಲಾಗುವುದು. ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕರಾದ ಶಂಕರ ಶ್ಯಾನುಭೋಗ್ ಹಾಗೂ ಮೂರು ಬಾರಿ ರಾಜ್ಯ ಪ್ರಶಸ್ತಿ ಪಡೆದಿರುವ ರಮೇಶ್ಚಂದ್ರ ಬೆಂಗಳೂರು ನೇತೃತ್ವದಲ್ಲಿ ೧೯ ಕಲಾವಿದರ ತಂಡ ಕಾರ್ಯಕ್ರಮ ಪ್ರಸ್ತುತಪಡಿಸಲಿದೆ ಎಂದರು.‘ನಾದ ನಂದನಂ’ ಸಂಸ್ಥೆಯನ್ನು ಖ್ಯಾತ ಗಾಯಕ ಶಂಕರ ಶ್ಯಾನುಭೋಗ್ ಉದ್ಘಾಟಿಸಲಿದ್ದಾರೆ. ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಉಡುಪಿಯ ಶ್ಯಾಮಿಲಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಜಿ.ಶಂಕರ್, ಕರ್ನಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ರಾಘವೇಂದ್ರ ಭಟ್, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಬಿ.ಸರ್ವೋತ್ತಮ ಶೆಟ್ಟಿ ಸೇರಿದಂತೆ ಬ್ಯಾಂಕಿಂಗ್, ಸಾಂಸ್ಕೃತಿಕ ಹಾಗೂ ಉದ್ಯಮ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘಟಕ ಎಸ್.ಎಲ್. ಭಾರದ್ವಾಜ್ ತಿಳಿಸಿದರು.
ಉಚಿತ ಪಾಸ್ ಲಭ್ಯ:ಕಾರ್ಯಕ್ರಮದ ಉಚಿತ ಪಾಸ್‌ಗಳು ಮಂಗಳೂರಿನ ನವಭಾರತ್ ಸರ್ಕಲ್ ಓಷಿಯನ್ ಪರ್ಲ್, ತಾಜ್ ಮಹಲ್, ಬಳ್ಳಾಲ್‌ಭಾಗ್‌ನ ಪತ್ತುಮುಡಿ, ಪಿವಿಎಸ್ ಅಯೋಧ್ಯಾ, ಪಂಪ್‌ವೆಲ್ ಪದ್ಮಶ್ರೀ ಹೋಟೆಲ್‌ಗಳ ಕೌಂಟರ್‌ಗಳಲ್ಲಿ ಲಭ್ಯವಿರುತ್ತವೆ ಎಂದರು.ಗೌರವ ಸ್ಥಾಪಕಾಧ್ಯಕ್ಷ, ಗಾಯಕ ರಮೇಶ್ಚಂದ್ರ, ಮುಲ್ಕಿ ರವೀಂದ್ರ ಪ್ರಭು, ಜಗನ್ನಾಥ್ ಶಿರ್ಲಾಲು ಇದ್ದರು.