ಸಾರಾಂಶ
ಕೆಂಪೇಗೌಡರು ಶೌರ್ಯ, ಸಾಹಸ, ದೂರದೃಷ್ಟಿಗೆ ಹೆಸರಾಗಿದ್ದು, ಬೆಂಗಳೂರು ನಗರವನ್ನು ಜಾತಿ ಆಧಾರಿತವಾಗಿ ಮಾಡದೆ, ವೃತ್ತಿ ಆಧಾರಿತ ಭೂಮಿಯನ್ನಾಗಿ ಮಾಡಿದರು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ನಾಯಕರಾಗಿದ್ದರು. ಮಣ್ಣಿನ ಕೋಟೆಯಿಂದ ಕಟ್ಟಿದ ಹಳ್ಳಿ ಪ್ರದೇಶ ವಾಗಿದ್ದ ಬೆಂದಕಾಳೂರನ್ನು ನಗರವಾಗಿ ನಿರ್ಮಿಸಿ ಬೆಂಗಳೂರು ನಗರ ಇಂದು ದೇಶ-ವಿದೇಶಿಗರಿಗೆ ಚಿರಪರಿಚಿತವಾಗಿದೆ ಎಂದರು.
ಚನ್ನರಾಯಪಟ್ಟಣ: ಕೆಂಪೇಗೌಡರು ಶೌರ್ಯ, ಸಾಹಸ, ದೂರದೃಷ್ಟಿಗೆ ಹೆಸರಾಗಿದ್ದು, ಬೆಂಗಳೂರು ನಗರವನ್ನು ಜಾತಿ ಆಧಾರಿತವಾಗಿ ಮಾಡದೆ, ವೃತ್ತಿ ಆಧಾರಿತ ಭೂಮಿಯನ್ನಾಗಿ ಮಾಡಿದರು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತಿ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ನಾಯಕರಾಗಿದ್ದರು. ಮಣ್ಣಿನ ಕೋಟೆಯಿಂದ ಕಟ್ಟಿದ ಹಳ್ಳಿ ಪ್ರದೇಶ ವಾಗಿದ್ದ ಬೆಂದಕಾಳೂರನ್ನು ನಗರವಾಗಿ ನಿರ್ಮಿಸಿ ಬೆಂಗಳೂರು ನಗರ ಇಂದು ದೇಶ-ವಿದೇಶಿಗರಿಗೆ ಚಿರಪರಿಚಿತವಾಗಿದೆ ಎಂದರು.
ಪುರಸಭಾ ಅಧ್ಯಕ್ಷ ಸಿ.ಎನ್. ಮೋಹನ್, ಉಪಾಧ್ಯಕ್ಷೆ ರಾಣಿಕೃಷ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎ.ಗಣೇಶ್, ಮುಖ್ಯಾಧಿಕಾರಿ ಆರ್. ಯತೀಶ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್, ಕೆಂಪೇಗೌಡ ವೇದಿಕೆಯ ಆನಂದ್ ಕಾಳೆನಹಳ್ಳಿ, ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಆರ್.ಮೂರ್ತಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಇತರರು ಇದ್ದರು.