ಸಾರಾಂಶ
ಕನ್ನಡಪ್ರಭ ವಾರ್ತೆ ಭಾಲ್ಕಿ
ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ ಮತ್ತು ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ದಾವಣಗೆರೆ ವತಿಯಿಂದ ಕೊಡಮಾಡುವ 2023ನೇ ಸಾಲಿನ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಇದೇ ಜು.27ರಂದು ಬೀದರ್‌ನ ಡಾ.ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಜಿಲ್ಲಾ ಕಸಾಪ ಹಾಗೂ ಜಿಲ್ಲಾ ಕಸಾಪ ದಾವಣಗೆರೆ ಮತ್ತು ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ದಾವಣಗೆರೆ ಸಹಯೋಗದಲ್ಲಿ ನಡೆಯಲಿರುವ 20223ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಡೋಜ ಪಟ್ಟದ್ದೇವರು ಅವರನ್ನು ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನಶೆಟ್ಟಿ, ದಾವಣಗೆರೆ ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್ ಉಪನ್ಯಾಸಕ ಶಾಂತರಾಜ ಎಸ್.ಜಿ, ಲೋಹಿತ್ ಕುಮಾರ ಡಿ.ಆರ್, ಕಸಾಪ ಪ್ರಧಾನ ಕಾರ್ಯದರ್ಶಿ ರಮೇಶ ಚಿದ್ರಿ, ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ನಗರ ಘಟಕದ ಅಧ್ಯಕ್ಷ ಸಂತೋಷ ಬಿಜಿ ಪಾಟೀಲ್, ಓಂಕಾರ ರಂಜೇರೆ ಇದ್ದರು.2023ನೇ ಸಾಲಿನ ಶರಣ ಮಾಗನೂರು ಬಸಪ್ಪ ಪ್ರಶಸ್ತಿಗೆ ಆಯ್ಕೆ ಆಗಿರುವ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರನ್ನು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಲಾಯಿತು. ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶುಕ್ರವಾರ ಜಿಲ್ಲಾ ಕಸಾಪ ಬೀದರ್, ಜಿಲ್ಲಾ ಕಸಾಪ ದಾವಣಗೆರೆ ಮತ್ತು ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ದಾವಣಗೆರೆ ವತಿಯಿಂದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಪೀಠಾಧಿಪತಿ ಗುರುಬಸವ ಪಟ್ಟದ್ದೇವರನ್ನು ಸನ್ಮಾನಿಸಿ, ಆಮಂತ್ರಣ ಪತ್ರಿಕೆ ನೀಡಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಲಾಯಿತು.