ಸಾರಾಂಶ
ಸೊರಬ ಪಟ್ಟಣದ ವಿದ್ಯುತ್ ನಗರದ ಡಾ.ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿರಿಯ ವಕೀಲ ವೈ.ಜಿ. ಪುಟ್ಟಸ್ವಾಮಿ ನಾಡಧ್ವಜಾರೋಹಣ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಸೊರಬ
ಕನ್ನಡ ನಾಡು, ನುಡಿ, ಜಲದ ವಿಷಯದಲ್ಲಿ ಪ್ರತಿಯೊಬ್ಬ ಕನ್ನಡಿಗರು ಒಗ್ಗಟ್ಟಾಗಿರಬೇಕು ಎಂದು ಹಿರಿಯ ವಕೀಲ ವೈ.ಜಿ. ಪುಟ್ಟಸ್ವಾಮಿ ಹೇಳಿದರು.ಶುಕ್ರವಾರ ಪಟ್ಟಣದ ವಿದ್ಯುತ್ ನಗರದ ಡಾ.ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯಕ್ಕೆ ಕರ್ನಾಟಕವೆಂದು ಮರುನಾಮಕರಣಗೊಂಡು 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರ ಸುವರ್ಣ ಸಂಭ್ರಮವನ್ನು ಆಚರಿಸುತ್ತಿದೆ. ಸ್ವಾಭಿಮಾನದ ಕೆಚ್ಚೆದೆ ಇರುವ ಕನ್ನಡಿಗರ ಹೋರಾಟ ಚರಿತ್ರೆಯ ಪುಟದಲ್ಲಿ ದಾಖಲಾಗಿದೆ. ಮನೆಗಳಲ್ಲಿ ಯಾವುದೇ ಭಾಷೆಯನ್ನು ಮಾತನಾಡಿದರೂ ಸಹ ವ್ಯವಹಾರಿಕವಾಗಿ ಕನ್ನಡ ಬಳಸಬೇಕು. ಇತರೆ ಭಾಷೆಗಳಿಗೆ ಗೌರವ ನೀಡುವ ಜೊತೆಗೆ ನೆಲದ ಭಾಷೆ ಕನ್ನಡದ ಬಗ್ಗೆ ಆತ್ಮಾಭಿಮಾನ ಹೊಂದಿರಬೇಕು ಎಂದು ಹೇಳಿದರು.ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರು ನಮ್ಮೆನ್ನೆಲ್ಲ ಅಗಲಿ ಮೂರು ವರ್ಷಗಳು ಕಳೆದಿವೆ. ಆದರೂ ಅಭಿಮಾನಿಗಳಲ್ಲಿ ಕಿಂಚಿತ್ತು ಅಭಿಮಾನ ಕಡಿಮೆಯಾಗಿಲ್ಲ. ಅಪ್ಪು ಹೆಸರಿನಲ್ಲಿ ಅನೇಕ ಸಾಮಾಜಿಕ ಕಾರ್ಯಗಳು ನಿರಂತರವಾಗಿ ನಡೆಯುತ್ತಿರುವುದೇ ಸಾಕ್ಷಿ. ನಾಡಿನಲ್ಲಿ ಮತ್ತೊಮ್ಮೆ ಪುನೀತ್ ರಾಜ್‌ಕುಮಾರ್ ಹುಟ್ಟಿಬರಲಿ ಎಂಬುದು ಕೋಟ್ಯಂತರ ಕನ್ನಡಿಗರ ಆಸೆಯೂ ಆಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಉಪಾಧ್ಯಕ್ಷ ಕೃಷ್ಣಮೂರ್ತಿ ಕೊಡಕಣಿ, ಉಪನ್ಯಾಸಕ ಎನ್.ಎಚ್.ಲಿಂಗೇಶ್, ಮಲ್ಲಿಕಾರ್ಜುನ, ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ಎಸ್.ಹರೀಶ್, ಅರುಣ್, ನಟೇಶ್, ಆರ್. ಕೃಷ್ಣಮೂರ್ತಿ, ಮನೋಜ್, ಗಂಧರ್ವ, ಇಬ್ರಾಹಿಂ, ಸಂತೋಷ, ಪ್ರಭಾಕರ, ರಾಜಪ್ಪ, ರಾಜೀವ್, ಪ್ರವೀಣ್, ರಾಘವೇಂದ್ರ ಸೇರಿ ಅನೇಕರಿದ್ದರು.