ವಿದೇಶಿ ಮಹಿಳೆ ಮೇಲೆ ಗ್ಯಾಂಗ್ರೇಪ್ ತಲೆ ತಗ್ಗಿಸುವ ವಿಷಯ

| Published : Mar 14 2025, 12:31 AM IST

ಸಾರಾಂಶ

ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಜೊತೆಗೆ ಅಲ್ಲಿರುವ ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ಗಳನ್ನು ಮುಚ್ಚಬೇಕು

ಕನ್ನಡಪ್ರಭ ವಾರ್ತೆ ಮೈಸೂರುಕೊಪ್ಪಳದಲ್ಲಿ ವಿದೇಶಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ ತಲೆ ತಗ್ಗಿಸುವಂತದ್ದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ಕೃತ್ಯ. ಈಗಾಗಲೇ ಅಲ್ಲಿನ ಎಸ್ಪಿಗೆ ಪತ್ರ ಬರೆದಿದ್ದೇನೆ. ಹಂಪಿಯನ್ನು ನೋಡಲು ಸಾಕಷ್ಟು ವಿದೇಶಿಗರು ಅಲ್ಲಿಗೆ ಬರುತ್ತಾರೆ. ಅಂತಹವರ ಮೇಲೆ ಹೇಯ ಕೃತ್ಯ ನಡೆಸಿದರೆ ಯಾವ ಸಂದೇಶ ಹೋಗುತ್ತದೆ. ಇದೊಂದು ತಲೆ ತಗ್ಗಿಸುವ ಸಂಗತಿ ಎಂದರು.ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಜೊತೆಗೆ ಅಲ್ಲಿರುವ ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ಗಳನ್ನು ಮುಚ್ಚಬೇಕು. ಅಲ್ಲಿಗೆ ಬರುವಂತಹ ವಿದೇಶಿಗರಿಗೆ ಹೆಚ್ಚಿನ ಭದ್ರತೆ ಕೊಡಬೇಕು ಎಂದು ಅವರು ಹೇಳಿದರು.ಗ್ಯಾರಂಟಿ ಯೋಜನೆಯಿಂದ ಸಬಲೀಕರಣಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ. ಅದನ್ನು ಪ್ರಶ್ನೆ ಮಾಡುವ ಅಧಿಕಾರ ವಿಪಕ್ಷಗಳಿಗಿಲ್ಲ. ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಒಳ್ಳೆಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಗ್ಯಾರಂಟಿಗಳಿಂದ ಒಬ್ಬ ಹೆಣ್ಣು ಮಗಳಿಗೆ ತಿಂಗಳಿಗೆ ನಾಲ್ಕೈದು ಸಾವಿರ ಉಳಿತಾಯ ಆಗುತ್ತದೆ. ಆ ಬಗ್ಗೆ ಟೀಕಿಸುವುದು ತಪ್ಪು ಎಂದರು.ಸೌಜನ್ಯ ಕೊಲೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಈ ಸಂಬಂಧ ನ್ಯಾಯಾಲಯದಿಂದಲೂ ತೀರ್ಪು ಬಂದಿದೆ. ನಾನು ಒಂದು ಸಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಲು ಆಗದು. ನಾನು ಮಾತ್ರ ಆ ಹೆಣ್ಣು ಮಗಳ ಪರವಾಗಿ ನಿಲ್ಲುತ್ತೇನೆ. ಆ ಪ್ರಕರಣದಲ್ಲಿ ಸಾವಿಗೀಡಾದ ಎಲ್ಲರಿಗೂ ನ್ಯಾಯ ಸಿಗಬೇಕು ಎನ್ನುವುದು ನನ್ನ ಆಶಯ. ಸಂತ್ರಸ್ತ ಕುಟುಂಬವನ್ನು ನಾನು ಭೇಟಿ ಮಾಡಿಲ್ಲ. ಧರ್ಮಸ್ಥಳಕ್ಕೆ ಹೋದಾಗ ಭೇಟಿ ಮಾಡುತ್ತೇನೆ. ಆದರೆ ಘಟನೆ ನಡೆದು ಹನ್ನೆರಡು ವರ್ಷಗಳಾಗಿದೆ ಎಂದು ಅವರು ತಿಳಿಸಿದರು.