ನಾಗಮಂಗಲ ಗಲಭೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

| Published : Sep 13 2024, 01:31 AM IST

ನಾಗಮಂಗಲ ಗಲಭೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿರುವ ಗಲಭೆ ಅತ್ಯಂತ ಖಂಡನಾರ್ಹವಾಗಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಮಂಡಲಿಗಳ ಒಕ್ಕೂಟದ ನೇತೃತ್ವದಲ್ಲಿ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

ಬಳಿಕ ಮಾಹಿತಿ ನೀಡಿದ ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ನಾಗಮಂಗಲದಲ್ಲಿ ನಡೆದಿರುವ ಗಲಭೆ ಪ್ರಕರಣ ಕೋಮುದ್ವೇಷದ ವಾತಾವರಣಕ್ಕೆ ಕಾರಣವಾಗಿದೆ. ಅನ್ಯಕೋಮಿನ ಕೆಲ ಪುಂಡರು ಮೆರವಣಿಗೆ ಮೇಲೆ ಕಲ್ಲು, ಚಪ್ಪಲಿಗಳನ್ನು ತೂರಿ, ಮಾರಕಾಸ್ತ್ರಗಳಿಂದ ಹಲವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಅಂಗಡಿಗಳ ಮೇಲೆ ಪೆಟ್ರೋಲ್‌ ಬಾಂಬ್‌ ಎಸೆಯುವ ಕೃತ್ಯಗಳು ನಡೆದಿದ್ದು, ತಡರಾತ್ರಿ ಅಂಗಡಿಗಳಿಗೆ ಬೆಂಕಿ ಹಚ್ಚಿ, ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ ಎಂಬ ವಿಚಾರ ಅತ್ಯಂತ ಖಂಡನಾರ್ಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಈ ಬಗೆಯ ಕುಕೃತ್ಯಗಳನ್ನು ಸರ್ಕಾರ ನಿಗ್ರಹಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ಹತ್ತಿಕ್ಕುವುದು ಸರ್ಕಾರದ ಕರ್ತವ್ಯವಾಗಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅಗ್ರಹಿಸಿದರು. ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

ಫೋಟೋ-12ಕೆಡಿಬಿಪಿ3-

ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣ ಖಂಡಿಸಿ, ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.