ಸಾರಾಂಶ
ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರ ನಾಮಪತ್ರ ಸಲ್ಲಿಕೆ ವೇಳೆ ನಡೆದ ಮೆರವಣಿಗೆಯಲ್ಲಿ ನಾಗಮಾರಪಳ್ಳಿ ಸಹೋದರರು ಕುದರೆ ಮೇಲೆ ಕುಳಿತು ಮೆರವಣಿಗೆಯಲ್ಲಿ ಪಾಲ್ಗೊಂಡರು.
ಬೀದರ್: ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ ವೇಳೆ ನಡೆದ ಮೆರವಣಿಗೆಯಲ್ಲಿ ಭಗವಂತ ಖೂಬಾ ಬೆಂಬಲಕ್ಕೆ ನಿಂತಿರುವ ಡಿಸಿಸಿ ಬ್ಯಾಂಕ್ ನಿರ್ದೇಶಕ ಉಮಾಕಾಂತ ನಾಗಮಾರಪಳ್ಳಿ, ಹಾಗೂ ಜೆಡಿಎಸ್ ನಾಯಕ ಸೂರ್ಯಕಾಂತ್ ನಾಗಮಾರಪಳ್ಳಿ ಅವರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಕುದರೆ ಮೇಲೆ ಕುಳಿತಿದ್ದ ಇಬ್ಬರೂ ಸಹೋದರರು ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿ ಜಯಘೋಷ ಮಾಡಿದರು.
ಗಣೇಶ ಮೈದಾನದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲೂ ಉಮಾಕಾಂತ ನಾಗಮಾರಪಳ್ಳಿ ಮತ್ತು ಸೂರ್ಯಕಾಂತ್ ನಾಗಮಾರಪಳ್ಳಿ ಪಾಲ್ಗೊಂಡು ಮಾತನಾಡಿದರು.