ಸಾರಾಂಶ
ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು ರಥೋತ್ಸವಕ್ಕೂ ಮುನ್ನ ಗ್ರಾಮದ ರಾಜಬೀದಿಗಳಲ್ಲಿ ಮಂಗಳವಾದ್ಯದೊಂದಿಗೆ ಶ್ರೀ ಕೆಂಪಮ್ಮ ದೇವಿಯವರ ಉತ್ಸವ ನಡೆಯಿತು. ಸಂಪ್ರದಾಯದಂತೆ ರಥದ ಸುತ್ತ ದೇವರ ಪ್ರದಕ್ಷಿಣೆ ನಡೆಸಿ ನಂತರ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಲಾಯಿತು. ಪೂಜಾ ವಿಧಿವಿಧಾನಗಳು ನೆರವೇರಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ರಥಕ್ಕೆ ಹಣ್ಣು ದವನ ಎಸೆಯೋ ಮೂಲಕ ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಬಾಗೂರು
ಹೋಬಳಿಯ ನವಿಲೆ ಗ್ರಾಮದ ಶ್ರೀ ಕೆಂಪಮ್ಮ ದೇವಿ ಯವರ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾನುವಾರ ನೆರವೇರಿತು.ರಥೋತ್ಸವದ ಅಂಗವಾಗಿ ಶುಕ್ರವಾರ ಹಾಗೂ ಶನಿವಾರ ಮತ್ತು ಭಾನುವಾರ ಮೂರು ದಿನಗಳ ಕಾಲ ದೇವಾಲಯದಲ್ಲಿ ಪ್ರತಿದಿನ ಬೆಳಗ್ಗೆಯಿಂದಲೇ ಪೂಜೆ ಅಭಿಷೇಕ ಹೂವಿನ ಅಲಂಕಾರ ಸೇರಿದಂತೆ ವಿಶೇಷ ಪೂಜೆಗಳು ನೆರವೇರಿತು. ಗ್ರಾಮದ ರಾಜಬೀದಿಗಳಲ್ಲಿ ಶ್ರೀ ಕೆಂಪಮ್ಮ ದೇವಿಯವರ ಉತ್ಸವ ನಡೆಯಿತು.
ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು ರಥೋತ್ಸವಕ್ಕೂ ಮುನ್ನ ಗ್ರಾಮದ ರಾಜಬೀದಿಗಳಲ್ಲಿ ಮಂಗಳವಾದ್ಯದೊಂದಿಗೆ ಶ್ರೀ ಕೆಂಪಮ್ಮ ದೇವಿಯವರ ಉತ್ಸವ ನಡೆಯಿತು. ಸಂಪ್ರದಾಯದಂತೆ ರಥದ ಸುತ್ತ ದೇವರ ಪ್ರದಕ್ಷಿಣೆ ನಡೆಸಿ ನಂತರ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಲಾಯಿತು. ಪೂಜಾ ವಿಧಿವಿಧಾನಗಳು ನೆರವೇರಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ರಥಕ್ಕೆ ಹಣ್ಣು ದವನ ಎಸೆಯೋ ಮೂಲಕ ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ರಥೋತ್ಸವದಲ್ಲಿ ಗುಡಿ ಗೌಡ್ರು ಎನ್ ನಾಗೇಂದ್ರ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ನವಿಲೆ ಪರಮೇಶ್, ಪ್ರಮುಖರಾದ ಫೋಟೋ ನಾಗರಾಜ್, ಶಿವಕುಮಾರ್, ಸಿಡಿ ರೇವಣ್ಣ, ಎನ್ ಕೆ ನಾಗಪ್ಪ, ಎನ್‌ಬಿ ನಾಗರಾಜ್, ಸದಾನಂದ, ಎಂಜಿನಿಯರ್ ಕುಮಾರ್, ಆಸ್ಪತ್ರೆ ಮಂಜಣ್ಣ ಮತ್ತು ಸಹೋದರರು ನವಿಲೆ ಗ್ರಾಮದ ಯುವಕರ ಬಳಗ ಮತ್ತು ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.