ಸಾರಾಂಶ
ಜ.27ರಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಈ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅಧ್ಯಕ್ಷರನ್ನಾಗಿ ಪಾವಜೇನಹಳ್ಳಿ ನಾಗರಾಜರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಮ್ಮರವರು ಅವಿರೋಧವಾಗಿ ಆಯ್ಕೆಯಾದರು.
ಗುಡಿಬಂಡೆ: ತಾಲೂಕಿನ ಚಿಕ್ಕಕುರುಬರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಾವಜೇನಹಳ್ಳಿ ನಾಗರಾಜರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಮ್ಮ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಮಂಜುನಾಥ್ ತಿಳಿಸಿದರು.
ತಾಲೂಕಿನ ಚಿಕ್ಕಕುರುಬರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ಈಗಾಗಲೇ ನಿರ್ದೇಶಕರ ಆಯ್ಕೆ ನಡೆದಿತ್ತು. ಜ.27ರಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಈ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅಧ್ಯಕ್ಷರನ್ನಾಗಿ ಪಾವಜೇನಹಳ್ಳಿ ನಾಗರಾಜರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಮ್ಮರವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ತಿಳಿಸಿದರು.ಇನ್ನೂ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಪಾವಜೇನಹಳ್ಳಿ ನಾಗರಾಜರೆಡ್ಡಿ ಮಾತನಾಡಿ, ನನ್ನನ್ನು ಎರಡನೇ ಬಾರಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಕಳೆದ ಬಾರಿ 80 ಲಕ್ಷ ಸಾಲ ನೀಡುವ ಗುರಿಯನ್ನು ಇಟ್ಟುಕೊಂಡಿದ್ದೆವು. ಈ ಬಾರಿ ರೈತರಿಗೆ, ಮಹಿಳಾ ಸಂಘಗಳಿಗೆ, ಕುರಿ, ಕೋಳಿ ಶೆಡ್ ನಿರ್ಮಿಸಲು ಸಾಲ ವಿತರಣೆ ಮಾಡುತ್ತೇವೆ. ಇದಕ್ಕಾಗಿ 1 ಕೋಟಿ ಸಾಲ ನೀಡುವ ಉದ್ದೇಶವನ್ನು ಇಟ್ಟುಕೊಂಡಿದ್ದೇವೆ. ನಮ್ಮ ಸಹಕಾರ ಸಂಘದ ಮೂಲಕ ಸಂಘದ ವ್ಯಾಪ್ತಿಯಲ್ಲಿ ರೈತರನ್ನು ಅಭಿವೃದ್ಧಿ ಮಾಡುವ ಮುಖ್ಯ ಉದ್ದೇಶವನ್ನು ನಮ್ಮ ಆಡಳಿತ ಮಂಡಳಿ ಹೊಂದಿದೆ ಎಂದು ತಿಳಿಸಿದರು.
ಬೈರಪ್ಪ, ನಂದೀಶ್, ಜೀವಿಕ ನಾರಾಯಣಸ್ವಾಮಿ, ಅಶ್ವತ್ಥಪ್ಪ, ಜಗದೀಶ್, ವೆಂಕಟೇಶಪ್ಪ, ಬಾಲೇನಹಳ್ಳಿ ರಮೇಶ್, ಅಂಜಿನಪ್ಪ ಸೇರಿ ಹಲವರು ನೂತನ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.