ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ನಾಗರಾಜು ಆಯ್ಕೆ

| Published : Feb 06 2024, 01:32 AM IST

ಸಾರಾಂಶ

ಮಾಗಡಿ: ತಾಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಾಗರಾಜು ಅವಿರೋಧವಾಗಿ ಆಯ್ಕೆಯಾದರು.

ಮಾಗಡಿ: ತಾಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಾಗರಾಜು ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಗರಾಜು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ವೆಂಕಟೇಶ್ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಘೋಷಣೆ ಮಾಡುತ್ತಿದ್ದಂತೆ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ನೂತನ ಅಧ್ಯಕ್ಷ ನಾಗರಾಜು ಮಾತನಾಡಿ, ಶಾಸಕ ಬಾಲಕೃಷ್ಣ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್. ಅಶೋಕ್ ಹಾಗೂ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದು ತಮಗೆ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಲಾಗುತ್ತದೆ. ಜಿಲ್ಲೆಯಲ್ಲಿ ನಮ್ಮ ಬ್ಯಾಂಕು ಎರಡನೇ ಸ್ಥಾನದಲ್ಲಿದ್ದು ಇಲ್ಲಿಯವರೆಗೂ 8 ಕೋಟಿ ಸಾಲವನ್ನು ರೈತರಿಗೆ ನೀಡಿದ್ದು ಬ್ಯಾಂಕ್ ಉಳಿಯಬೇಕಾದರೆ ರೈತರು ಸಕಾಲಕ್ಕೆ ಸಾಲ ಪಾವತಿಸುವ ಮೂಲಕ ಇತರ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಕಾರ ನೀಡಬೇಕು. ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಹೊಸ ಕಟ್ಟಡ ಕಟ್ಟಲು ಜಾಗ ನೀಡುವಂತೆ ಶಾಸಕರಿಗೆ ಮನವಿ ಮಾಡಲಾಗಿದ್ದು ನಿರ್ದೇಶಕರೆಲ್ಲರ ಸಲಹೆ ಪಡೆದು ಹೊಸ ಕಟ್ಟಡಕ್ಕೆ ನಿವೇಶನ ಹೊಡೆಯುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದೆ ವೇಳೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಹೆಚ್.ಎನ್. ಅಶೋಕ್, ಮಾಜಿ ಅಧ್ಯಕ್ಷ ಎಂ.ಕೆ. ಧನಂಜಯ, ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಬ್ಯಾಂಕ್ ಉಪಾಧ್ಯಕ್ಷರಾದ ನಿರ್ಮಲಾ ಸೀತಾರಾಂ, ನಿರ್ದೇಶಕರಾದ ಚಕ್ರಬಾವಿ ರವೀಂದ್ರ, ವೇಣುಗೋಪಾಲ್, ಗಂಗರಾಜು, ದೇವೇಂದ್ರ ಕುಮಾರ್, ತಿಮ್ಮರಾಯಪ್ಪ, ಹನುಮಂತಯ್ಯ, ಚಂದ್ರಶೇಖರ್, ವಿಶ್ವನಾಥ್, ಚಂದ್ರೇಗೌಡ, ಮೀನಾಕ್ಷಮ್ಮ, ವ್ಯವಸ್ಥಾಪಕರಾದ ಸುರೇಶ್, ಸಿಬ್ಬಂದಿ ಶಿವಕುಮಾರ್, ಸಂತೋಷ್ ಇತರರು ಭಾಗವಹಿಸಿದ್ದರು.

ಪೋಟೋ 5ಮಾಗಡಿ2:

ಮಾಗಡಿ ತಾಲೂಕಿನ ಪಿಎಲ್‌ಡಿ ಬ್ಯಾಂಕ್ ನೂತನ ಅಧ್ಯಕ್ಷ ನಾಗರಾಜು ಅವರನ್ನು ಬೆಂಬಲಿಗರು ಅಭಿನಂದಿಸಿದರು.