ಗೋಣಿತುಮಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಾಗರತ್ನ ರಂಗಸ್ವಾಮಿ

| Published : Dec 14 2024, 12:46 AM IST

ಗೋಣಿತುಮಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಾಗರತ್ನ ರಂಗಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಗೋಣಿತುಮಕೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ನಾಗರತ್ನ ರಂಗಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ತುರುವೇಕೆರೆ

ತಾಲೂಕಿನ ಗೋಣಿತುಮಕೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ನಾಗರತ್ನ ರಂಗಸ್ವಾಮಿ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದಿನ ಅಧ್ಯಕ್ಷೆ ಕಲ್ಪನಾ ಆಶೋಕ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ೧೪ ಸದಸ್ಯರ ಬಲ ಹೊಂದಿರುವ ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆಗೆ ೧೦ ಸದಸ್ಯರು ಭಾಗವಹಿಸಿದ್ದರು. ೪ ಸದಸ್ಯರು ಗೈರು ಹಾಜರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಗ್ರೇಡ್ ೨ ಸುಮತಿ ಕರ್ತವ್ಯ ನಿರ್ವಹಿಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕೃಷ್ಣಯ್ಯ ಮುಂದುವರೆದಿದ್ದಾರೆ. ನೂತನ ಅಧ್ಯಕ್ಷರ ಬೆಂಬಲಿಗರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗಮ್ಮ, ಲಕ್ಷ್ಮಮ್ಮ, ಕಲ್ಪನಾ, ಬೇಬಿತ್ಯಾಗರಾಜು, ಚಂದ್ರಯ್ಯ, ಕೆ.ವಿ.ಶಂಕರ್, ಜಯಲಕ್ಷ್ಮಮ್ಮ, ಎಂ.ಬಿ.ನೇತ್ರಾವತಿ ಪಿಡಿಒ ಸೋಮಶೇಖರ್, ಕಾರ್ಯದರ್ಶಿ ಲೋಕೇಶ್ ನಾಯಕ್, ಗುತ್ತಿಗೆದಾರರಾದ ಬಡಗರಹಳ್ಳಿ ತ್ಯಾಗರಾಜು, ಪ್ರಕಾಶ್ ಸೇರಿ ಇತರರು ಅಭಿನಂದಿಸಿದರು.