ಖಾಸಗಿ ಜಮೀನು ಖರೀದಿಸಿ ಸ್ಮಶಾನದ ವ್ಯವಸ್ಥೆ

| Published : Aug 02 2025, 01:45 AM IST

ಖಾಸಗಿ ಜಮೀನು ಖರೀದಿಸಿ ಸ್ಮಶಾನದ ವ್ಯವಸ್ಥೆ
Share this Article
  • FB
  • TW
  • Linkdin
  • Email

ಸಾರಾಂಶ

ಈಗಾಗಲೇ ಖಾಸಗಿಯವರಿಂದ ಜಮೀನು ಖರೀದಿಸಲು ಜಿಲ್ಲಾಧಿಕಾರಿಯವರ ಪ್ರಕ್ರಿಯೆ ಹಂತದಲ್ಲಿದೆ ಶೀಘ್ರದಲ್ಲಿ ಜಮೀನು ಖರೀದಿಸಿ ಸ್ಮಶಾನ ವ್ಯವಸ್ಥೆ

ಕನ್ನಡಪ್ರಭ ವಾರ್ತೆ ನಂಜನಗೂಡು

ತಾಲೂಕಿನ ಸರಗೂರು ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗ ಕಲ್ಪಿಸಲು ಸರ್ಕಾರಿ ಜಾಗ ಇಲ್ಲದೆ ಇರುವುದರಿಂದ ಖಾಸಗಿಯಾಗಿ ಜಮೀನು ಖರೀದಿಸಿ ಸ್ಮಶಾನದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ತಾಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದ ಕಂದಾಯ ಅದಾಲತ್ ಮತ್ತು ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರಗೂರು ಗ್ರಾಮಸ್ಥರು ಸ್ಮಶಾನ ಜಾಗ ಕಲ್ಪಿಸಿ ಕೊಡುವಂತೆ ಮನವಿ ಮಾಡಿದ್ದಾರೆ, ಈಗಾಗಲೇ ಖಾಸಗಿಯವರಿಂದ ಜಮೀನು ಖರೀದಿಸಲು ಜಿಲ್ಲಾಧಿಕಾರಿಯವರ ಪ್ರಕ್ರಿಯೆ ಹಂತದಲ್ಲಿದೆ ಶೀಘ್ರದಲ್ಲಿ ಜಮೀನು ಖರೀದಿಸಿ ಸ್ಮಶಾನ ವ್ಯವಸ್ಥೆ ಕಲ್ಪಿಸಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಸಾಮಾಜಿಕ ಭದ್ರತೆ ಯೋಜನೆ ಅಡಿಯಲ್ಲಿ ಐದು ಜನ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಪತ್ರವನ್ನು ವಿತರಿಸಲಾಗಿದೆ, ಅಲ್ಲದೆ ರಸ್ತೆ ಅಭಿವೃದ್ಧಿಪಡಿಸುವಂತೆ ಹಾಗೂ ಗ್ರಾಮದ ಅಭಿವೃದ್ಧಿಗೆ ಸೇರಿದಂತೆ ಹಲವಾರು ಮನವಿಗಳು ಬಂದಿದ್ದು ಶೀಘ್ರದಲ್ಲೇ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಅಭಿವೃದ್ಧಿಗೆ ಅನುದಾನ ನಿಯೋಜಿಸಲಾಗುವುದು ಎಂದು ಭರವಸೆ ನೀಡಿದರು.

ತಾಲೂಕಿನ ಬಸವನಪುರ ಗ್ರಾಮದಲ್ಲಿ 10 ಲಕ್ಷ ವೆಚ್ಚದಲ್ಲಿ ಬಸವಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು, ಅಲ್ಲದೆ ತಾಲೂಕಿನ ಹನಂಬಳ್ಳಿಯಲ್ಲಿ 15 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಶಾಲಾ ಕೊಟ್ಟಡಿಯನ್ನು ಉದ್ಘಾಟಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ತಾಪಂ ಮಾಜಿ ಸದಸ್ಯ ಪದ್ಮನಾಭ, ಮುಖಂಡರಾದ ಸಿ.ಆರ್. ಮಹದೇವು, ಗುರುಪಾದು, ಗಿರಿಧರ್, ಮೋಹನ, ಮಹದೇವಸ್ವಾಮಿ, ಗ್ರಾಪಂ ಸದಸ್ಯರಾದ ಗಿರೀಶ್, ಭದ್ರನಾಯಕ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಆರ್ . ಮಹದೇವು ಇದ್ದರು.