ಕಾರ್ಮಿಕ ವಿಭಾಗಕ್ಕೆ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನಾಗೇಂದ್ರಸ್ವಾಮಿ ನೇಮಕ

| Published : Oct 06 2024, 01:30 AM IST

ಕಾರ್ಮಿಕ ವಿಭಾಗಕ್ಕೆ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನಾಗೇಂದ್ರಸ್ವಾಮಿ ನೇಮಕ
Share this Article
  • FB
  • TW
  • Linkdin
  • Email

ಸಾರಾಂಶ

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್‌ನ ಕಾರ್ಮಿಕರ ವಿಭಾಗದ ಕಾರ್ಯಾಧ್ಯಕ್ಷರನ್ನಾಗಿ ಗ್ರಾಪಂ ಸದಸ್ಯ ಗೂಳಿಪುರ ನಾಗೇಂದ್ರಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ ಆದೇಶ ಪ್ರತಿಯನ್ನು ನೀಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲಾ ಕಾಂಗ್ರೆಸ್‌ನ ಕಾರ್ಮಿಕರ ವಿಭಾಗದ ಕಾರ್ಯಾಧ್ಯಕ್ಷರನ್ನಾಗಿ ಗ್ರಾಪಂ ಸದಸ್ಯ ಗೂಳಿಪುರ ನಾಗೇಂದ್ರಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ ಆದೇಶ ಪ್ರತಿಯನ್ನು ನೀಡಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾರ್ಮಿಕ ವಿಭಾಗದ ಕಾರ್ಯಕಾರಣಿ ಸಮಿತಿಯ ಸಭೆಯಲ್ಲಿ ನೂತನ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ನಾಗೇಂದ್ರಸ್ವಾಮಿ ಅವರಿಗೆ ಆದೇಶ ಪ್ರತಿ ನೀಡಿ ಅಭಿನಂದಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ಸಂಘಟಿಸಿ, ಅವರಿಗೆ ರಾಜ್ಯ ಸರ್ಕಾರ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಸಹ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಪೂರಕವಾಗಿದೆ. ಜೊತೆಗೆ ಕಾರ್ಮಿಕ ಇಲಾಖೆಯಲ್ಲಿ ಅನೇಕ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು, ಈ ಎಲ್ಲವು ಸಹ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಇಂದಿನಿಂದಲೆ ಕಾರ್ಯಯೋಜನೆ ರೂಪಿಸಿಕೊಂಡು ಪಕ್ಷವನ್ನು ಸಂಘಟನೆ ಮಾಡುವ ಜೊತೆಗೆ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮಾಡಬೇಕು ಎಂದರು. ಕಾರ್ಮಿಕ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೇಮಕವಾದ ಗೂಳಿಪುರ ನಾಗೇಂದ್ರಸ್ವಾಮಿ ಆದೇಶ ಪ್ರತಿ ಸ್ವೀಕರಿಸಿ ಮಾತನಾಡಿ, ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಆದೇಶದ ಮೇರೆಗೆ ಹಾಗೂ ಕಾರ್ಮಿಕದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡರು, ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಹರಿಣಿಗೌಡ ಹಾಗೂ ಜಿಲ್ಲಾಧ್ಯಕ್ಷ ಎಸ್. ಮಹೇಶ್ ಅವರ ಮಾರ್ಗದರ್ಶನಂತೆ ನನ್ನನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಆಭಾರಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡುವ ಜೊತೆಗೆ ಶಾಸಕರು, ಸಂಸದರು ಹಾಗೂ ಡಿಸಿಸಿ ಅಧ್ಯಕ್ಷರು ಸೂಚನೆಯಂತೆ ಜಿಲ್ಲೆಯಲ್ಲಿ ಸಕ್ರಿಯವಾಗಿ ಪಕ್ಷ ಸಂಘಟನೆಗೆ ದುಡಿಯುವುದಾಗಿ ನಾಗೇಂದ್ರಸ್ವಾಮಿ ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಹರಿಣಿ ಗೌಡ, ಜಿಲ್ಲಾಧ್ಯಕ್ಷ ಎಸ್. ಮಹೇಶ್, ತಾಲೂಕು ಅಧ್ಯಕ್ಷ ಚಿಕ್ಕಮಾದಶೆಟ್ಟಿ ಮೊದಲಾದವರು ಇದ್ದರು.