ಸಾರಾಂಶ
ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರ ಮಾರ್ಗದರ್ಶನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಆಸ್ರಣ್ಣ ನೇತೃತ್ವದಲ್ಲಿ ಧಾರ್ಮಿಕ, ವೈದಿಕ ವಿಧಿವಿಧಾನಗಳು ನಡೆದವು.
ಬೆಳ್ತಂಗಡಿ: ನಾಳದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆ ಪ್ರಯುಕ್ತ ಬ್ರಹ್ಮರಥೋತ್ಸವ ಸೋಮವಾರ ರಾತ್ರಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆಯಿತು.
ಸೋಮವಾರ ನಿತ್ಯ ಬಲಿ, ದರ್ಶನ ಬಲಿ ಮೊದಲಾದ ಧಾರ್ಮಿಕ ವಿಧಿ ವಿಧಾನಗಳು ನಡೆದವು. ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರ ಮಾರ್ಗದರ್ಶನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಆಸ್ರಣ್ಣ ನೇತೃತ್ವದಲ್ಲಿ ಧಾರ್ಮಿಕ, ವೈದಿಕ ವಿಧಿವಿಧಾನಗಳು ನಡೆದವು. ದೇವಸ್ಥಾನದ ಆಡಳಿತಾಧಿಕಾರಿ ಶ್ರವಣ್ ಕುಮಾರ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಂ., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ದೇವಸ್ಥಾನದ ಕಚೇರಿ ನಿರ್ವಾಹಕ ಗಿರೀಶ್ ಶೆಟ್ಟಿ ಜಿ.ಎಸ್., ಭಕ್ತರು ಉಪಸ್ಥಿತರಿದ್ದರು. ರಾತ್ರಿ ವಿವಿಧ ಭಕ್ತಿ ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.