ನಾಲ್ವಡಿ ಕೃಷ್ಣರಾಜ ಒಡೆಯರ್‌ ಸ್ಮರಣೆ

| Published : Jan 28 2024, 01:15 AM IST

ಸಾರಾಂಶ

ಕೃಷ್ಣರಾಜ ಒಡೆಯರ್‌ ಅವರ ಜೀವನ ಸಾಧನೆ ಬಗ್ಗೆ ಹಂಸಲೇಖ ರೂಪಿಸಿರುವ ರೂಪಕ ಶ್ರೀಘ ಪ್ರದರ್ಶನ ನಡೆಯಲಿದೆ ಎಂದು ಪ್ರಮೋದಾದೇವಿ ಒಡೆಯರ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮುಂದಿನ ದಸರಾ ಸಂಭ್ರಮಕ್ಕೂ ಮೊದಲೇ ಮೈಸೂರು ಅರಮನೆ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಜೀವನ ಸಾಧನೆ-ಕೊಡುಗೆ ಕುರಿತು ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಅವರು ರಚಿಸಿರುವ ರೂಪಕ ಪ್ರದರ್ಶನಗೊಳ್ಳಲಿದೆ.

ನಗರದ ಬೆಂಗಳೂರು ಸಿಟಿ ಇನ್‌ಸ್ಟಿಟ್ಯೂಟ್‌ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸಂಸ್ಮರಣೆ ಹಾಗೂ ನಾಲ್ವಡಿ ಕುರಿತ ಕಿರು ಚಿತ್ರ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಇನ್‌ಸ್ಟಿಟ್ಯೂಟ್‌ ನೀಡಿದ ಗೌರವ ಸದಸ್ಯತ್ವ ಸ್ವೀಕರಿಸಿದ ರಾಜಮಾತೆ ಡಾ.ಪ್ರಮೋದಾದೇವಿ ಒಡೆಯರ್‌ ಅವರು, ಈಗಾಗಲೇ ನಾಲ್ವಡಿ ಕೃಷ್ಣರಾಜ ಅವರ ಜೀವನ ಸಾಧನೆ, ಕೊಡುಗೆ ಕುರಿತು ಹಂಸಲೇಖ ಅವರು ರೂಪಕ ರಚಿಸಿದ್ದು ಕನ್ನಡಿಗರಿಗೆ ಅರ್ಪಿಸಲಿದ್ದಾರೆ ಎಂದು ಪ್ರಕಟಿಸಿದರು.

ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿ, ನಾಲ್ವಡಿ ಅವರ ಸಾಧನೆ ನಮಗೆಲ್ಲರಿಗೂ ಆದರ್ಶಪ್ರಾಯ ಎಂದ ಅವರು, ಕನ್ನಡವನ್ನು ಕೇವಲ ಭಾಷೆಯೆಂದು ಪರಿಗಣಿಸದೆ ಅದನ್ನು ನಮ್ಮ ಹಕ್ಕಿನ ಪತ್ರ ಎಂದು ತಿಳಿದುಕೊಳ್ಳಬೇಕೆಂದು ಹೇಳಿದರು.

ಬೆಂಗಳೂರು ಸಿಟಿ ಇನ್‌ಸ್ಟಿಟ್ಯೂಟ್‌ ಅಧ್ಯಕ್ಷ ಕೆ.ಸುಕುಮಾರ್, ಉಪಾಧ್ಯಕ್ಷ ಎಸ್‌.ಸಿ. ಚಂದ್ರಶೇಖರ್, ಗೌರವ ಕಾರ್ಯದರ್ಶಿ ಲಕ್ಷ್ಮೀಶ ಚಂದ್ರ, ಗೌರವ ಖಜಾಂಚಿ ವಿರೂಪಾಕ್ಷ ಬಿ ಪಿ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.