ಇಂದು ಕಂಬಳ ಸಾಧಕರಿಗೆ ಪ್ರಶಸ್ತಿ ಪ್ರದಾನ

| Published : May 17 2024, 12:35 AM IST

ಸಾರಾಂಶ

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ರೋಹನ್ ಕಾರ್ಪೋರೇಷನ್ ಪ್ರೈ.ಲಿ. ನಿರ್ದೇಶಕ ರೋಹನ್ ಮೊಂತೇರೊ ಅವರಿಗೆ ನಮ್ಮ ಕಂಬಳ ಗೌರವ ನೀಡಿ ಸಮ್ಮಾನಿಸಲಾಗುವುದು.

ಕನ್ನಡಪ್ರಭ ವಾರ್ತೆ ಮಂಗಳೂರು

ನಮ್ಮ ಕುಡ್ಲ ವಾಹಿನಿ, ನಮ್ಮ ಕಂಬಳ ಟೀಂ ದುಬೈ ಹಾಗೂ ಸಂತ ಅಲೋಶಿಯಸ್ (ಪರಿಗಣಿತ ವಿವಿ) ಆಯೋಜನೆಯಲ್ಲಿ ‘ನಮ್ಮ ಕಂಬಳ ಪ್ರಶಸ್ತಿ 2024’ ಕಂಬಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ಸಂಜೆ 4ರಿಂದ ನಗರದ ಸಂತ ಅಲೋಶಿಯಸ್ ಕಾಲೇಜಿನ ಎಲ್.ಎಫ್. ರಸ್ಕಿನ್ಹ ಹಾಲ್‌ನಲ್ಲಿ ನಡೆಯಲಿದೆ.

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ, ಸಂತ ಅಲೋಶಿಯಸ್ ಡೀಮ್ಡ್ ವಿವಿ ಕುಲಪತಿ ಡಾ. ಪ್ರವೀಣ್ ಮಾರ್ಟಿಸ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಪ್ರಮುಖರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಕೃಷ್ಣ ಜೆ. ಪಾಲೇಮಾರ್, ರೋಹನ್ ಮೊಂತೇರೊ, ಕಿಶೋರ್ ಆಳ್ವ, ಪ್ರತಾಪ್ ಮಧುಕರ ಕಾಮತ್, ಪ್ರಶಾಂತ್ ಶೇಟ್, ಪ್ರೊ. ಗುಣಪಾಲ ಕಡಂಬ, ಭಾಸ್ಕರ ಕೋಟ್ಯಾನ್, ಡಾ. ಆದರ್ಶ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಹರೀಶ್ ಬಿ. ಕರ್ಕೇರ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ರೋಹನ್ ಕಾರ್ಪೋರೇಷನ್ ಪ್ರೈ.ಲಿ. ನಿರ್ದೇಶಕ ರೋಹನ್ ಮೊಂತೇರೊ ಅವರಿಗೆ ನಮ್ಮ ಕಂಬಳ ಗೌರವ ನೀಡಿ ಸಮ್ಮಾನಿಸಲಾಗುವುದು. ಸೀತಾರಾಮ ಶೆಟ್ಟಿ-ಬಂಟ್ವಾಳ ಮಕಾಳಿಬೆಟ್ಟು ಮಲ್ಲಿಕಾ ಶೆಟ್ಟಿ ಬಳ್ಳುಂಜೆ, ಜಾನ್ ಸಿರಿಲ್ ಡಿಸೋಜಾ ಸರಪಾಡಿ (ಅಪ್ಪು), ಸಾನೂರು ಶ್ರೀಧರ ಆಚಾರ್ಯ ಅವರಿಗೆ ನಮ್ಮ ಕಂಬಳ ವಿಶೇಷ ಗೌರವ ನೀಡಲಾಗುತ್ತದೆ ಎಂದರು.

ನಮ್ಮ ಕುಡ್ಲ ಸಿಇಒ ಕದ್ರಿ ನವನೀತ ಶೆಟ್ಟಿ ಮಾತನಾಡಿ, 24 ಕಂಬಳಗಳಲ್ಲಿ ಅತಿ ಹೆಚ್ಚು ಬಹುಮಾನಗಳನ್ನು ಪಡೆದ ಆಧಾರದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಘೋಷಿಸಲಾಗಿದೆ. ಕನೆ ಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ, ಅಡ್ಡ ಹಲಗೆಯಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ, ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್, ಹಗ್ಗ ಕಿರಿಯ ವಿಭಾಗದಲ್ಲಿ ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ, ನೇಗಿಲು ಹಿರಿಯ ವಿಭಾಗದಲ್ಲಿ ಬೋಳದಗುತ್ತು ಸತೀಶ್ ಶೆಟ್ಟಿ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ ಶೆಟ್ಟಿ ಹೀಗೆ ಕೋಣಗಳ ಯಜಮಾನರಿಗೆ ಚಾಂಪಿಯನ್ ಅವಾರ್ಡ್ ನೀಡಲಾಗುವುದು ಎಂದರು.