ಸಾರಾಂಶ
ಹೊಸಕೋಟೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾಲೂಕಿನ ಡಿ.ಶೆಟ್ಟಿಹಳ್ಳಿ ಬಳಿ ದಿಢೀರನೆ ಆಗಮಿಸಿ ಹೊಸಕೋಟೆಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಪರಿಶೀಲಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಹೊಸಕೋಟೆಯಲ್ಲಿ 18500 ಎಕರೆಯಲ್ಲಿ ನಂದಗುಡಿ ಟೌನ್ ಶಿಪ್ ನಿರ್ಮಿಸಲು ಉದ್ದೇಶಿಸಲಾಗಿದೆ. ಯೋಜನೆ ಕುರಿತಂತೆ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ. ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡುವ ದಿಸೆಯಿಂದ ಹೊಸ ದಿಕ್ಕಿನತ್ತ ನಾವು ಹೆಜ್ಜೆ ಇಡುತ್ತಿದ್ದೇವೆ. ಸ್ಯಾಟಲೈಟ್ ರಿಂಗ್ ರಸ್ತೆ ಸಾಗುವ ಕಡೆಗೆ ಹೊಸ ಟೌನ್ ಶಿಪ್‌ಗಳನ್ನು ನಿರ್ಮಿಸಿ ಅಗತ್ಯ ಮೂಲ ಸೌಲಭ್ಯ ಹಾಗೂ ರಸ್ತೆ, ರೈಲು, ಮೊದಲಾದ ಸೌಲಭ್ಯಗಳನ್ನು ಒದಗಿಸುವುದು. ನಮ್ಮ ಸರ್ಕಾರದ ಗುರಿಯಾಗಿದೆ ಎಂದರು.
18500 ಎಕರೆಯಲ್ಲಿ ನಂದಗುಡಿ ಟೌನ್ ಶಿಪ್ ನಿರ್ಮಾಣ ಮಾಡುವ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವನ್ನಾಗಿಸುವುದು ನಮ್ಮ ಕನಸಾಗಿದೆ ಎಂದು ತಿಳಿಸಿದರು.
ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಡಿ.ಶೆಟ್ಟಿಹಳ್ಳಿ ಬಳಿ ಪರೀಲನೆ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಲಕ್ಕೂರು ಬಳಿ ನೂತನ ಟೌನ್ ಶಿಪ್ ನಿರ್ಮಿಸುವ ಉದ್ದೇಶ ಹೊಂದಿದ್ದು ಜಾಗ ಗುರುತಿಸುವ ಜೊತೆಗೆ ಉದ್ದೇಶಿತ ಯೋಜನಾ ಪ್ರದೇಶದ ನೀಲ ನಕ್ಷೆಯನ್ನು ಪರಿಶೀಲಿಸಿದರು.ಫೋಟೋ: 12 ಹೆಚ್‌ಎಸ್‌ಕೆ 4 ಮತ್ತು 5
ಹೊಸಕೋಟೆ ತಾಲೂಕಿನ ನಂದಗುಡಿ ಬಳಿ ನಿರ್ಮಿಸಲು ಉದ್ದೇಶಿಸಿರುವ ನಂದಗುಡಿ ಟೌನ್‌ಶಿಪ್ ಯೋಜನೆ ಬಗ್ಗೆ ಡಿ.ಶೆಟ್ಟಿಹಳ್ಳಿ ಬಳಿ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿದರು.