ನೀರು ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿ, ಹಾಳಾಗಿರುವ ಮೋಟಾರ್‌ಗಳು ಹಾಗೂ ಸಂಬಂಧಿತ ವ್ಯವಸ್ಥೆಗಳನ್ನು ದುರಸ್ತಿಪಡಿಸಿ, ಎಲ್ಲಾ ಪ್ರದೇಶಗಳಿಗೂ ಸಮರ್ಪಕವಾಗಿ ನೀರು ತಲುಪುವಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
ನಂದಾವರ: ಸಜೀಪ ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 3ನೇ ವಾರ್ಡ್‌ನ ನಂದಾವರ ಕೋಟೆ, ದಾಸರಗುಡ್ಡೆ, ವಿಂಡೀಸ್ ನಗರ ಗುಂಪುಮನೆ ಹಾಗೂ ಮುಳಿಹಿತ್ಲು ಪ್ರದೇಶಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿ, ನಿವಾಸಿಗಳಿಗೆ ಸಮರ್ಪಕ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಪ್ರದೇಶಗಳಲ್ಲಿ ನೀರಿನ ಪೂರೈಕೆ ಸಮರ್ಪಕವಾಗಿಲ್ಲದ ಕಾರಣ ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಲಾಯಿತು. ನೀರು ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿ, ಹಾಳಾಗಿರುವ ಮೋಟಾರ್‌ಗಳು ಹಾಗೂ ಸಂಬಂಧಿತ ವ್ಯವಸ್ಥೆಗಳನ್ನು ದುರಸ್ತಿಪಡಿಸಿ, ಎಲ್ಲಾ ಪ್ರದೇಶಗಳಿಗೂ ಸಮರ್ಪಕವಾಗಿ ನೀರು ತಲುಪುವಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.ಈ ಸಂದರ್ಭದಲ್ಲಿ ಸಜೀಪ ಮುನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಜಮಾಲ್ ರಾಯಲ್, ಸ್ಥಳೀಯರಾದ ಸಾದಿಕ್ ಕೋಟೆ ಹಾಗೂ ಅಕ್ರಮ್ ರಾಯಲ್ ಉಪಸ್ಥಿತರಿದ್ದರು.