ಕರಡಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ನಂದೀಶ್, ದೊಡ್ಡೇಗೌಡ ಆಯ್ಕೆ

| Published : Sep 01 2024, 01:58 AM IST

ಸಾರಾಂಶ

ಈ ಹಿಂದಿನ ಅಧ್ಯಕ್ಷ ಕೆ.ಗಿರೀಶ್ ಮತ್ತು ಉಪಾಧ್ಯಕ್ಷ ಗುರುಶಾಂತ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಟಿ.ನಂದೀಶ್, ಉಪಾಧ್ಯಕ್ಷ ಸ್ಥಾನಕ್ಕೆ ದೊಡ್ಡೇಗೌಡ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನ ಕರಡಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬೆಂಬಲಿತರಾದ ಟಿ.ನಂದೀಶ್ ಮತ್ತು ದೊಡ್ಡಯಗಟಿ ಕೊಪ್ಪಲು ಗ್ರಾಮದ ದೊಡ್ಡೇಗೌಡ ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದಿನ ಅಧ್ಯಕ್ಷ ಕೆ.ಗಿರೀಶ್ ಮತ್ತು ಉಪಾಧ್ಯಕ್ಷ ಗುರುಶಾಂತ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಟಿ.ನಂದೀಶ್, ಉಪಾಧ್ಯಕ್ಷ ಸ್ಥಾನಕ್ಕೆ ದೊಡ್ಡೇಗೌಡ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಇನ್ನುಳಿದ ಅವಧಿಗೆ ಅಧ್ಯಕ್ಷರಾಗಿ ಟಿ.ನಂದೀಶ್ ಮತ್ತು ಉಪಾಧ್ಯಕ್ಷರಾಗಿ ದೊಡ್ಡೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಶೋಭ ಪ್ರಕಟಿಸಿದರು.

ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ನಂದೀಶ್, ಸಂಘದಲ್ಲಿ ಸದಸ್ಯತ್ವ ಹೊಂದಿರುವ ರೈತರ ಶ್ರೇಯೋಭಿವೃದ್ಧಿಗಾಗಿ ಸಂಘದ ಮೂಲಕ ಸಿಗಬಹುದಾದ ಸರ್ಕಾರದ ಬಡ್ಡಿರಹಿತ ಸಾಲ ಸೌಲಭ್ಯ ಸೇರಿದಂತೆ ಇನ್ನಿತರೆ ಸವಲತ್ತುಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ಅವಿರೋಧ ಆಯ್ಕೆಯಾಗುತ್ತಿದ್ದಂತೆ ಸ್ಥಳೀಯ ಕಾರ್ಯಕರ್ತರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಬೃಹತ್ ಹಾರ ಹಾಕಿ ಸಂಘದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಘದ ನಿರ್ದೇಶಕರಾದ ಕೆ.ಗಿರೀಶ್, ಪಿ.ಚಂದ್ರಶೇಖರ್, ಲಕ್ಷ್ಮಿ ನಾಗರಾಜು, ಶ್ವೇತ ಮಹೇಶ್, ರಮೇಶ್, ಬಸವರಾಜು, ಟಿ.ಜಿ.ಸುರೇಶ್, ಗುರುಶಾಂತ, ಸಂಘದ ಸಿಇಒ ಕೆ.ಎಂ.ರಾಮು ಸೇರಿದಂತೆ ಮುಖಂಡರು, ಹಾಗೂ ಕಾರ್ಯಕರ್ತರು ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.