ವಿದ್ಯಾರ್ಥಿಗಳ ಶಿಕ್ಷಣವು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ವ್ಯಕ್ತಿತ್ವ ನಿರ್ಮಾಣ, ಸಾಮಾಜಿಕ ಜವಾಬ್ದಾರಿ ಮತ್ತು ಜೀವನ ಕೌಶಲ್ಯಗಳ ಬೆಳವಣಿಗೆಯನ್ನೂ ಒಳಗೊಂಡಿರಬೇಕು
ಕನ್ನಡಪ್ರಭ ವಾರ್ತೆ ಮೈಸೂರುಮೈಸೂರು ನಗರ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಕಾಶ್ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಕೆ.ಪಿ. ಮಾದೇಶ್ ಅವರು ಕುವೆಂಪುನಗರದ ಅವರ ನಿವಾಸದಲ್ಲಿ ಅಭಿನಂದಿಸಿದರು.ಜೆಎಸ್‌ಎಸ್‌ಸಂಸ್ಥೆಯ ಸಹಾಯಕ ಆಡಳಿತಾಧಿಕಾರಿ ಜಿ.ಎಲ್. ತ್ರಿಪುರಾಂತಕ ಮಾತನಾಡಿ, ನೂತನ ಅಧ್ಯಕ್ಷರ ಆಯ್ಕೆಯು ಮಹಾಸಭೆಯ ಸಂಘಟನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ಮತ್ತು ಕ್ರಿಯಾಶೀಲತೆ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ದುಗ್ಗಟ್ಟಿ ರಾಜೇಶ್ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ಅವರು ಉತ್ತಮ ಸಂಘಟನಾಚಾತುರ್ಯ ಹಾಗೂ ನಾಯಕತ್ವ ಗುಣ ಬೆಳೆಸಿಕೊಂಡಿದ್ದಾರೆ. ಸಮಾಜಮುಖಿ ಚಿಂತನೆ ಮತ್ತು ಸಂಘಟನಾ ಕೌಶಲ್ಯದಿಂದ ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗುವ ಗುಣ ಅವರಲ್ಲಿದೆ. ಅವರ ಅಧ್ಯಕ್ಷತೆಯಲ್ಲಿ ಮಹಾಸಭೆ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿದೆ ಎಂದು ಹೇಳಿದರು.ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಕೇಂದ್ರ ಸಮಿತಿ ಸದಸ್ಯ ಎಚ್.ಎಸ್. ಮಹದೇವಸ್ವಾಮಿ ಮಾತನಾಡಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಶತಮಾನದ ಇತಿಹಾಸ ಮತ್ತು ಪರಂಪರೆ ಹೊಂದಿರುವ ಪ್ರತಿಷ್ಠಿತ ಸಂಸ್ಥೆ. ಮಹಾಸಭೆಯ ಆಶ್ರಯದಲ್ಲಿ ಇದುವರೆಗೆ ಸುಮಾರು 24 ಅಧಿವೇಶನಗಳು ಯಶಸ್ವಿಯಾಗಿ ನಡೆದಿದ್ದು, ಪ್ರತಿಯೊಂದು ಅಧಿವೇಶನದಲ್ಲಿಯೂ ಲಿಂಗಾಯತ ಧರ್ಮದ ಸ್ವತಂತ್ರ ಅಸ್ತಿತ್ವ ಹಾಗೂ ಅದಕ್ಕೆ ಸಂವಿಧಾನಾತ್ಮಕ ಮಾನ್ಯತೆ ದೊರಕಬೇಕೆಂಬ ಆಶಯವನ್ನು ಪ್ರತಿಪಾದಿಸಲಾಗಿದೆ. ಸಂವಿಧಾನಾತ್ಮಕ ಮಾನ್ಯತೆ ದೊರೆಯುವುದು ಮಾತ್ರ ಬಾಕಿ ಇದೆ ಎಂದು ತಿಳಿಸಿದರು.ಮಹಾಸಭೆಯ ಸಂಸ್ಥಾಪಕ ಅಧ್ಯಕ್ಷ ಸಿರಸಂಗಿ ಲಿಂಗರಾಜ ದೇಸಾಯಿ ಅವರಿಂದ ಹಿಡಿದು ಇಲ್ಲಿಯವರೆಗೆ ಮಹಾಸಭೆಯನ್ನು ಮುನ್ನಡೆಸಿದ ಎಲ್ಲ ಅಧ್ಯಕ್ಷರು ಲಿಂಗಾಯತ ಧರ್ಮದ ವ್ಯಾಪ್ತಿಗೆ ಬರುವ ವಿವಿಧ ಉಪಪಂಗಡಗಳನ್ನು ಒಗ್ಗೂಡಿಸಿಕೊಂಡು ಸಾಗುವ ಮಹತ್ತರ ಕಾರ್ಯವನ್ನು ನಿರ್ವಹಿಸಿದ್ದಾರೆ. ನೂತನ ಅಧ್ಯಕ್ಷ ಪ್ರಕಾಶ್ ಅವರು ಈ ಪರಂಪರೆಯನ್ನು ಮತ್ತಷ್ಟು ಬಲಪಡಿಸಿ ಸಮಾಜದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.ಕನ್ನಡ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ ಮಾತನಾಡಿ, ಪ್ರಕಾಶ್ ಅವರು ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿಯಾಗಿದ್ದು, ಸಮಾಜದ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಗುಣ ಹೊಂದಿದ್ದಾರೆ. ಇಂತಹ ವ್ಯಕ್ತಿ ಮಹಾಸಭೆಯ ಅಧ್ಯಕ್ಷರಾಗಿರುವುದು ಸಮುದಾಯಕ್ಕೆ ಮತ್ತು ಸಮಾಜಕ್ಕೆ ಸಂತಸದ ಸಂಗತಿ ಎಂದು ಅಭಿಪ್ರಾಯಪಟ್ಟರು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಅವರು ಮೈಸೂರು ನಗರದಾದ್ಯಂತ ವಾಸಿಸುವ ಎಲ್ಲಾ ಲಿಂಗಾಯಿತರನ್ನು ಮಹಾಸಭೆಯ ಸದಸ್ಯರನ್ನಾಗಿಸಲು ಸದಸ್ಯತ್ವ ಆಂದೋಲನ ಹಮ್ಮಿಕೊಳ್ಳಲಾಗುವುದು. ಮುಂಬರುವ ಚುನಾವಣೆಗಳಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ವಿವಿಧ ಪಕ್ಷಗಳಿಂದ ಲಿಂಗಾಯಿತ ಅಭ್ಯರ್ಥಿಗಳು ಸ್ಪರ್ಧಿಸುವಂಥಾಗಲು ಸರ್ವ ರೀತಿಯಲ್ಲೂ ಶ್ರಮಿಸುವುದಾಗಿ ತಿಳಿಸಿದರು.ಕೇಂದ್ರ ಸಮಿತಿ ಸದಸ್ಯರಾದ ಮಹದೇವಸ್ವಾಮಿ ಅವರನ್ನು ಅಭಿನಂದಿಸಲಾಯಿತು .ಬಾಬು ಪ್ರಸಾದ್, ಮೂಗೂರು ವಿಜಯ್, ಕೆ.ಜಿ.ಐ.ಡಿ. ಶಿವಕುಮಾರ್, ಸುಬ್ಬಣ್ಣ, ಕೆ.ಬಿ. ಜಯಣ್ಣ, ಮಾಸ್ಟರ್ ಸುರೇಶ್, ಮರಳಿ ನಟೇಶ್, ವೇದಮೂರ್ತಿ, ಯೋಗೀಶ್, ಕೆ.ಪಿ. ಗಿರೀಶ್, ಎಂ.ಸಿ.ಎಸ್. ಮಹದೇವಸ್ವಾಮಿ ಮೊದಲಾದವರು ಇದ್ದರು.