ಬಿಲ್ಲವ ಸಮಾಜದ ನಾಪೋಕ್ಲು ವತಿಯಿಂದ 9 ರಂದು ಆಟಿಡೊಂಜಿ ದಿನ ಕಾರ್ಯಕ್ರಮ ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ ಎಂದು ನಾಪೋಕ್ಲು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ. ಪ್ರತೀಪ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಬಿಲ್ಲವ ಸಮಾಜದ ನಾಪೋಕ್ಲು ವತಿಯಿಂದ 9 ರಂದು ಆಟಿಡೊಂಜಿ ದಿನ ಕಾರ್ಯಕ್ರಮ ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ ಎಂದು ನಾಪೋಕ್ಲು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ. ಪ್ರತೀಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಬೆಳಗ್ಗೆ 10 ಗಂಟೆಗೆ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಲಾಗುವುದು. ಇದರಲ್ಲಿ ಸುಮಾರು 100 ಯೂನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಿದೆ. ಸಾರ್ವಜನಿಕರ ಬಂದು ಸ್ವಇಚ್ಛೆಯಿಂದ ರಕ್ತದಾನ ಮಾಡಬಹುದಾಗಿದೆ ಎಂದರು. 11 ಗಂಟೆಗೆ ನಾಪೋಕ್ಲು-ಭಾಗಮಂಡಲ ಮುಖ್ಯರಸ್ತೆಯ ಬಿಲ್ಲವ ಸಮಾಜ ಸ್ವಂತ ಜಾಗದಲ್ಲಿ ಬಿಲ್ಲವ ಸಮುದಾಯ ಭವನ ಶಂಕು ಸ್ಥಾಪನೆ ಆಯೋಜಿಸಲಾಗಿದೆ. 11.30ಕ್ಕೆ ಕೊಡವ ಸಮಾಜದಲ್ಲಿ ಆಟಿಡೊಂಜಿ ದಿನ ಸಭಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಧಕರಿಗೆ ಸನ್ಮಾನ ಹಾಗೂ ಮನೆಯಲ್ಲಿ ಮಾಡಿದ ಆಟಿ ಮಾಸದ ಸಾಂಪ್ರದಾಯಿಕ ತಿನಿಸುಗಳ ಪ್ರದರ್ಶನ ಆಯೋಜಿಸಲಾಗಿದೆ. ಸಮಾಜ ಬಾಂಧವರಿಗಾಗಿ ಹಾಗೂ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಮನರಂಜನಾ ಕ್ರೀಡಾಕೂಟ ಜರುಗಲಿದೆ ಎಂದರು. ಸೋಲೂರು ರಾಮನಗರದ ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ ಉಪಸ್ಥಿತರಿರುವರು. ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ. ಪ್ರತೀಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸಭಾಪತಿ ಕೆ.ಜಿ. ಬೋಪಯ್ಯ, ಬಿಲ್ಲವ ಸಮಾಜ ಒಕ್ಕೂಟದ ಜಿಲ್ಲಾಧ್ಯಕ್ಷ ಲಿಂಗಪ್ಪ, ವಿರಾಜಪೇಟೆ ವೃತ್ತದ ಡಿ ವೈ ಎಸ್ ಪಿ ಮಹೇಶ್ ಕುಮಾರ್ , ಮಡಿಕೇರಿ ರಕ್ತನಿಧಿ ಅಧಿಕಾರಿ ಕರಂಬಯ್ಯ, ನಿವೃತ್ತ ಉಪಮುಖ್ಯ ವೈದ್ಯಾಧಿಕಾರಿ ಡಾ. ಎಚ್ ವಿ ದೇವದಾಸ್ , ಮಡಿಕೇರಿ ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ, ಬೆಂಗಳೂರಿನ ಉದ್ಯಮಿ ವೆಂಕಪ್ಪ ಪೂಜಾರಿ, ಕಾಂಗ್ರೆಸ್ ಮುಖಂಡ ರವೀಂದ್ರ , ಉದ್ಯಮಿ ಹಾಗೂ ಸಮಾಜ ಸೇವಕ ಎಡಿಕೇರಿ ಪ್ರಸನ್ನ ಪಾಲ್ಗೊಳ್ಳುವರು.

ವಿರಾಜಪೇಟೆ ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ. ಗಣೇಶ್, ಸೋಮವಾರಪೇಟೆ ಬಿಲ್ಲವ ಸಮಾಜದ ಅಧ್ಯಕ್ಷ ಚಂದ್ರಹಾಸ, ಕುಶಾಲನಗರ ಬಿಲ್ಲವ ಸಮಾಜದ ಅಧ್ಯಕ್ಷ ಸುದೀರ್ , ಸುಂಟಿಕೊಪ್ಪ ಬಿಲ್ಲವ ಸಮಾಜದ ಅಧ್ಯಕ್ಷ ಮಣಿ ಮುಕೇಶ್, ಸಿದ್ದಾಪುರ ಬಲ್ಲವ ಸಮಾಜದ ಅಧ್ಯಕ್ಷ ರಂಜನ್ ಬಿ.ವಿ, ಮದೆನಾಡು ಬಿಲ್ಲವ ಸಮಾಜದ ಅಧ್ಯಕ್ಷ ತಾರಾನಾಥ ಬಿ.ಎಸ್ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ಬಿಲ್ಲವ ಸಮಾಜದ ಉಪಾಧ್ಯಕ್ಷ ಬಿ ಆರ್. ವಸಂತ, ಕಾರ್ಯದರ್ಶಿ ಕೆ ಎಸ್. ಲೋಹಿತ್, ಸಂಘಟನಾ ಕಾರ್ಯದರ್ಶಿ ಬಿ.ಎಸ್ ನಾಗರಾಜ್ (ಪ್ರಕಾಶ್), ಕ್ರೀಡಾ ಕಾರ್ಯದರ್ಶಿ ಬಿ ಎಸ್ ದಿಲೀಪ್ , ಸದಸ್ಯರಾದ ಬಿ.ಪಿ.ಪುನೀತ್ ಇದ್ದರು.