ಸಾರಾಂಶ
ಮಾದಕ ವಸ್ತುಗಳ ಸೇವನೆ ಹಾಗೂ ಅದರಿಂದ ಸಮಾಜಕ್ಕೆ ಆಗುವ ದುಷ್ಪಾರಿಣಾಮಗಳ ಹಾಗೂ ಇತರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಾಪೋಕ್ಲು ಪೊಲೀಸ್ ಠಾಣಾ ವತಿಯಿಂದ ಮಾದಕ ವಸ್ತುಗಳ ಸೇವನೆ ಹಾಗೂ ಅದರಿಂದ ಸಮಾಜಕ್ಕೆ ಆಗುವ ದುಷ್ಪರಿಣಾಮಗಳ ಹಾಗೂ ಇತರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಶನಿವಾರ ಕಾರ್ಯಕ್ರಮ ಹಮ್ಮಿಕೊಂಡು ಜಾಗೃತಿ ಮೂಡಿಸಲಾಯಿತು. ಕರ್ನಾಟಕ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಠಾಣಾಧಿಕಾರಿ ರಾಘವೇಂದ್ರ ಅವರು ಮಕ್ಕಳಿಗೆ ಆಗುತ್ತಿರುವ ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ, ವಾಹನ ಚಾಲನ ನಿಯಮ ಮತ್ತು ರಸ್ತೆ ಸುರಕ್ಷತೆ, ಮಾದಕ ವಸ್ತುಗಳ ಸೇವನೆಯ ದುಷ್ಟರಿಣಾಮಗಳು, ಮೊಬೈಲ್ ಬಳಕೆಯಿಂದ ಆಗುವ ಡಿಜಿಟಲ್ ಸಮಸ್ಯೆಗಳು ಇವುಗಳ ಬಗ್ಗೆ ಠಾಣಾಧಿಕಾರಿ ಪಿ.ಜಿ.ರಾಘವೇಂದ್ರ ಅವರು ಮಾತನಾಡಿ ಸವಿವರವಾದ ಮಾಹಿತಿ ನೀಡಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಶಿವಣ್ಣ, ಶಾಲಾ ಶಿಕ್ಷಕರು, ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.