ಸ್ಥಳೀಯ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನವನ್ನು ಶ್ರೀ ಭಗವತಿ ದೇವಾಲಯ ಸಮುದಾಯ ಭವನದಲ್ಲಿ ಭಾನುವಾರ ಆಚರಿಸಲಾಯಿತು.
ಕನ್ನಡಪ್ರಭವಾರ್ತೆ ನಾಪೋಕ್ಲು
ಸ್ಥಳೀಯ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನವನ್ನು ಶ್ರೀ ಭಗವತಿ ದೇವಾಲಯ ಸಮುದಾಯ ಭವನದಲ್ಲಿ ಭಾನುವಾರ ಆಚರಿಸಲಾಯಿತು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಕಂಗಂಡ ಜಾಲಿ ಪೂವಪ್ಪ ಯೋಗದ ಮಹತ್ವ, ಪ್ರಯೋಜನಗಳು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಯೋಗದ ಪಾತ್ರ ವಿವರಿಸಿದರು.
ಬಿಜೆಪಿ ಶಕ್ತಿಕೇಂದ್ರದ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯುತ್ತಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ ಎಂದರು.