ಸಾರಾಂಶ
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಎಮ್ಮೆಮಾಡು, ಬಲ್ಲಮಾ ವಟಿ, ಆಯ್ಯಂಗೆರಿ ಗ್ರಾಮ ಪಂಚಾಯಿತಿ ಹಂತದಲ್ಲಿ ನಡೆಯಿತು. ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾಲ್ಗೊಂಡಿದ್ದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಎಮ್ಮೆಮಾಡು, ಬಲ್ಲಮಾ ವಟಿ, ಆಯ್ಯಂಗೆರಿ ಗ್ರಾಮ ಪಂಚಾಯಿತಿ ಹಂತದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.ವಿವಿಧೆಡೆ ನಡೆದ ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾಲ್ಗೊಂಡಿದ್ದರು.
ಸ್ಥಳಿಯ ಪೊಲೀಸ್ ಮೈದಾನದಲ್ಲಿ ಸೋಮವಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ , ಗ್ರಾಮ ಪಂಚಾಯಿತಿ ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ , ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲರಾದ ಶಿವಣ್ಣ ಎಂ.ಎಸ್. ಗ್ರಾಮ ಪಂಚಾಯಿತಿ ಸದಸ್ಯರಾದ ಯಶೋಧ ಕಟ್ಟಿ, ಗಂಗಮ್ಮ , ಲಲಿತ, ಗ್ರಾಮ ಪಂಚಾಯಿತಿ ಸದಸ್ಯ ಮಾಚೇಟಿರ ಕುಸು ಕುಶಾಲಪ್ಪ, ಟಿ. ಎ. ಮಹಮ್ಮದ್ ಪಾಲ್ಗೊಂಡಿದ್ದರು. ಕೆಪಿಎಸ್ ಶಾಲೆಯ ಶಿಕ್ಷಕಿ ಉ ಷಾರಾಣಿ ಸಂವಿಧಾನದ ರಚನೆ ಆಶಯಗಳ ಕುರಿತು ವಿವಿಧ ಶಾಲೆಗಳ ಶಿಕ್ಷಕರು ಭಾಷಣ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ ಮಾತನಾಡಿ ಜಾತದ ದೇವೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಪ್ರಮಾಣ ವಚನ ಸ್ವೀಕರಿಸಲಾಯಿತು.ಇದಕ್ಕೂ ಮುನ್ನ ನಾಪೋ ಕ್ಲು ಗ್ರಾಮ ಪಂಚಾಯಿತಿ ಎದುರುಗಡೆ ಬಸು ನಿಲ್ದಾಣದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ, ಸದಸ್ಯರು ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಪುಷ್ಪಾರ್ಚನೆ ಮಾಡಿ ಸ್ವಾಗತಿಸಲಾಯಿತು. ಅನಂತರ ಸ್ಕೌಟ್ಸ್ ಗೈಡ್ಸ್ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಪಟ್ಟಣದ ಮುಖ್ಯಬೀದಿಗಾಗಿ ಪೊಲೀಸ್ ಮೈದಾನಕ್ಕೆ ಬರಲಾಯಿತು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು, ವಿವಿಧ ಶಾಲೆಗಳ ಶಿಕ್ಷಕ ವೃಂದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂವಿಧಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ರಸಪ್ರಶ್ನೆ ಪ್ರಬಂಧ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು.