ಸಾರಾಂಶ
ಜ. 17 ಮತ್ತು 18ರಂದು ಚೆಟ್ಟಿಮಾನಿಯಲ್ಲಿ ಗ್ರಾಮ ಸಿರಿ ಜನಮನ್ನಣೆಯೊಂದಿಗೆ ಅತ್ಯಂತ ಯಶಸ್ಸು ಜರುಗಿತು. ಇದರ ಅಂಗವಾಗಿ ಚೆಟ್ಟಿಮಾನಿಯ ಶಾದಿ ಮಹಲ್ ನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಸಿರಿ ಆಚರಣಾ ಸಮಿತಿ ಅಧ್ಯಕ್ಷ ಪಾಣ ತಲೆ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸಂಪನ್ನಗೊಂಡಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಕುಂದಚೇರಿ ಭಾಗಮಂಡಲ ಅಯ್ಯಂಗೇರಿ ಗ್ರಾಮ ಪಂಚಾಯತ್ ಗಳ ಸಹಯೋಗದಲ್ಲಿ ಜ. 17 ಮತ್ತು 18ರಂದು ಚೆಟ್ಟಿಮಾನಿಯಲ್ಲಿ ನಡೆದ ಗ್ರಾಮ ಸಿರಿ ಜನಮನ್ನಣೆಯೊಂದಿಗೆ ಅತ್ಯಂತ ಯಶಸ್ಸು ಜರುಗಿತು. ಇದರ ಅಂಗವಾಗಿ ಚೆಟ್ಟಿಮಾನಿಯ ಶಾದಿ ಮಹಲ್ ನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಗ್ರಾಮ ಸಿರಿ ಆಚರಣಾ ಸಮಿತಿ ಅಧ್ಯಕ್ಷರಾದ ಪಾಣ ತಲೆ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೋಳಿ
ಬೈಲು ವೆಂಕಟೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಂದಚೇರಿ ಗ್ರಾ.ಪಂ. ಅಧ್ಯಕ್ಷರಾದ ಪೊಡನೊಳನ ಬಿ. ದಿನೇಶ್ ಗ್ರಾಮ ಸಿರಿಯ ಲೆಕ್ಕಪತ್ರ ಮಂಡನೆ ಮಾಡಿದರು. ಕುಯ್ಯಮುಡಿ ಮನೋಜ್ ಅವರು ಮಾತನಾಡಿ, ಕಾರ್ಯಕ್ರಮದಿಂದ ಉಳಿಕೆಯಾದ ಹಣವನ್ನು ಚೆಟ್ಟಿಮಾನಿ ಶಾಲಾ ಮೈದಾನದ ಅಭಿವೃದ್ಧಿಗೆ ಬಳಸಲಾಗುವುದು ಎಂದರು.ಸಭೆ ಸರ್ವಾನುಮತದಿಂದ ಅನುಮೋದಿಸಿತು. ನಂತರ ಗ್ರಾಮಸಿರಿ ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾದವರನ್ನು
ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಹಾಗೂ ಹೋಬಳಿ ಅಧ್ಯಕ್ಷ ಸುನಿಲ್ ಪತ್ರಾವೊ ಗ್ರಾಮ ಸಿರಿಯ ಯಶಸ್ವಿಗೆ ಕೈಜೋಡಿಸಿದ ಗ್ರಾಮಸ್ಥರು ಹಾಗೂ ಸಮಿತಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಎಲ್ಲ ಉಪಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು. ಪಾಣತಲೆ ವಿಶ್ವನಾಥ್ ಅವರು ಸರ್ವರನ್ನು ಅಭಿನಂದಿಸಿದರು. ಕುಂದಚೇರಿ ಗ್ರಾಮ ಪಂಚಾಯಿತಿ ಸದಸ್ಯರಾದ ಹ್ಯಾರಿಸ್ ಅವರು ಸರ್ವರನ್ನು ಸ್ವಾಗತಿಸಿ ವಂದಿಸಿದರು.