ಸಾರಾಂಶ
ಮೂರ್ನಾಡು ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಮೂರ್ನಾಡು ವಿದ್ಯಾ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಹಿರಿಯ ವಕೀಲೆಯಾದ.ಕೆ.ಎಂ.ಮೀನಾಕುಮಾರಿ, ಮಹಿಳೆಯರಿಗೆ ಲಭ್ಯವಿರುವ ಕಾನೂನು ಹಕ್ಕುಗಳ ಕುರಿತು ಉದಾಹರಣೆಗಳೊಂದಿಗೆ ವಿವರಿಸಿದರು. ವಿಶೇಷವಾಗಿ, ಮಹಿಳಾ ಸುರಕ್ಷತೆ, ಆಸ್ತಿಯ ಹಕ್ಕು, ಶಿಕ್ಷಣ ಹಕ್ಕು, ಕೆಲಸದ ಸ್ಥಳದಲ್ಲಿ ಲೈಂಗಿಕ ಶೋಷಣೆಗೆ ವಿರುದ್ಧದ ಕಾನೂನು, ಕೌಟುಂಬಿಕ ಹಿಂಸೆ ತಡೆಕಾಯ್ದೆ ಹಾಗೂ ಮಹಿಳೆಯರು ತಮ್ಮ ಹಕ್ಕುಗಳನ್ನು ಅರಿತು, ಸಮಾಜದಲ್ಲಿ ಆತ್ಮವಿಶ್ವಾಸದಿಂದ ಮುಂದುವರಿಯಬೇಕು ಎಂಬ ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷರಾದ ಡಾ. ಚೌರಿರ ಜಗತ್ತಿಮ್ಮಯ್ಯ ವಹಿಸಿದ್ದರು. ಕಾರ್ಯದರ್ಶಿಗಳಾದ ಪೆಮ್ಮುಡಿಯಂಡ ವೇಣು ಅಪ್ಪಣ್ಣ,ಕಾಲೇಜಿನ ಪ್ರಾಂಶುಪಾಲ ಕೆ. ಎಸ್ ವಿಲ್ಮಾ , ಪ್ರಾಧ್ಯಾಪಕರು, ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.