ಸಾರಾಂಶ
ಮೂರ್ನಾಡಿನ ಕೊಡವ ಸಮಾಜದಲ್ಲಿ ಲಯನ್ಸ್ ಕ್ಲಬ್‌ನ 2025-26ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಲಯನ್ಸ್ ಕ್ಲಬ್‌ನ ಸದಸ್ಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಲಯನ್ಸ್ ಇಂಟರ್ ನ್ಯಾಷನಲ್ ಫೌಂಡೇಶನ್ ಸಂಯೋಜಕ ಪಿ.ವಿ.ಅನಿಲ್ ಕುಮಾರ್ ಹೇಳಿದರು.ಇಲ್ಲಿಗೆ ಸಮೀಪದ ಮೂರ್ನಾಡಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಲಯನ್ಸ್ ಕ್ಲಬ್‌ನ 2025-26ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕ್ಲಬ್‌ನ ನಿಸ್ವಾರ್ಥ ಸೇವೆ ಹಾಗೂ ಧ್ಯೇಯೋದ್ದೇಶಗಳ ಬಗ್ಗೆ ಮಾತನಾಡಿ, ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಅಮ್ಮಾಟಂಡ ಚಂಗಪ್ಪ, ಕಾರ್ಯದರ್ಶಿಯಾಗಿ ಪಳಂಗಂಡ ಕಾವೇರಪ್ಪ ಮತ್ತು ಖಜಾಂಚಿಯಾಗಿ ಮಾಳೇಟಿರ ಮೇದಪ್ಪ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು. ಅನಿಲ್ ಕುಮಾರ್ ಪ್ರತಿಜ್ಞಾವಿಧಿ ಬೋಧಿಸಿ, ಪದಾಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ತಿಳಿಸಿದರು.
ಈ ಸಂದರ್ಭ ಪ್ರಾಂತೀಯ ಅಧ್ಯಕ್ಷ ಡಾ.ಪಂಚಂ ತಿಮ್ಮಯ್ಯ, ಜಿಲ್ಲಾ ಜಂಟಿ ಕಾರ್ಯದರ್ಶಿ ಸುಮನ್ ಬಾಲಚಂದ್ರ, ಮೂರ್ನಾಡು ಕ್ಲಬ್‌ನ ನಿಕಟ ಪೂರ್ವ ಅಧ್ಯಕ್ಷ ಬಡುವಂಡ ಕನ್ನು ಅಪ್ಪಚ್ಚು, ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಬಡವಂಡ ಅರುಣ್ ಅಪ್ಪಚ್ಚು, ವಲಯಾಧ್ಯಕ್ಷ ಬಡುವಂಡ ವಿಂದ್ಯಾ ಗಣಪತಿ ಸೇರಿದಂತೆ ಜಿಲ್ಲೆಯ ವಿವಿಧ ಕ್ಲಬ್‌ಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು .