ಸಾರಾಂಶ
ಹಿಂದೂ ಸಂಘಟನೆಗಳ ಪ್ರಮುಖರು, ನಾಪೋಕ್ಲು ಪಟ್ಟಣದ ಮನೆ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಿ, ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಹಾಗೂ ಆಚರಣೆಯ ಬಗ್ಗೆ ಮಾಹಿತಿಯನ್ನುನೀಡಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಮನೆ ಮನೆಗೆ ಪವಿತ್ರ ಮಂತ್ರಾಕ್ಷತೆ ವಿತರಣಾ ಅಭಿಯಾನದ ಅಂಗವಾಗಿ ಅಯೋಧ್ಯೆ ಶ್ರೀರಾಮ ಮಂದಿರದಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಬುಧವಾರ ಇಲ್ಲಿನ ರಾಮಮಂದಿರದಲ್ಲಿ ಪೂಜಾ ವಿಧಿ ವಿಧಾನಗಳೊಂದಿಗೆ ನಾಪೋಕ್ಲು ಗ್ರಾಮದ ಹಿಂದೂ ಸಂಘಟನೆಗಳ ಪ್ರಮುಖರಿಗೆ ಹಸ್ತಾಂತರಿಸಲಾಯಿತು.ಬಳಿಕ ಹಿಂದೂ ಸಂಘಟನೆಗಳ ಪ್ರಮುಖರು, ಮನೆ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಿ, ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಹಾಗೂ ಆಚರಣೆಯ ಬಗ್ಗೆ ಮಾಹಿತಿಯನ್ನುನೀಡಿದರು. ಸ್ಥಳೀಯ ಪಟ್ಟಣದಲ್ಲಿ ರಾಮ ಭಕ್ತರಾದ ಜಾಲಿ ಪೂವಪ್ಪ, ಸುಬ್ಬಯ್ಯ, ಪಟ್ಟು ಪೆಮ್ಮಯ್ಯ, ಸುಗು ಕುಮಾರ್, ರಾಜೇಂದ್ರ
ಇನ್ನಿತರರು ಉಪಸ್ಥಿತರಿದ್ದರು. ಈ ಸಂದರ್ಭ ಅರ್ಚಕ ರವಿ ಉಡುಪ ಮಾತನಾಡಿ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಜನವರಿ 22 ರಂದು ಪ್ರತಿಷ್ಠಾಪನಾ ದಿನದಂದು ಪ್ರತಿಯೊಬ್ಬರ ಮನೆಯಲ್ಲಿ ಹಣತೆಗಳನ್ನು ಹಚ್ಚಿಡುವ ಮೂಲಕ ಶ್ರೀರಾಮನ ಕೃಪೆಗೆ ಪಾತ್ರರಾಗಬೇಕು ಎಂದರು.ಚೇರಂಬಾಣೆ, ಬಲ್ಲಮಾವಟಿ, ನರಿಯಂದಡ, ಮರಂದೋಡ ಸೇರಿದಂತೆ ಎಲ್ಲ ಗ್ರಾಮಗಳಲ್ಲೂ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಅಭಿಯಾನ ಜನವರಿ 15ರ ವರೆಗೆ ನಡೆಯಲಿದೆ.