ನಾಪೋಕ್ಲು: ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ಪ್ರಾರ್ಥನೆ

| Published : May 10 2025, 01:03 AM IST

ಸಾರಾಂಶ

ಪ್ರಸ್ತುತ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷಗಳು ನಡೆಯುತ್ತಿದ್ದು, ಭಾರತೀಯರ ಸಂರಕ್ಷಣೆಗಾಗಿ ಶತ್ರುಗಳೊಂದಿಗೆ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಭಾರತೀಯ ಸೈನಿಕರ ಯಶಸ್ಸಿಗೆ ಪ್ರಾರ್ಥಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಪಟ್ಟಣದ ಮೊಹಿಯದ್ದೀನ್ ಜುಮಾ ಮಸೀದಿಯಲ್ಲಿ ಶುಕ್ರವಾರ ಭಾರತದ ಯೋಧರ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಬಳಿಕ ಮಾತನಾಡಿದ ಖತೀಬ ಉಬೈದುಲ್ಲ ಸುಖಾಫಿ, ದೇಶದ ಸಾಮರಸ್ಯತೆ ಮತ್ತು ಆರ್ಥಿಕತೆಯನ್ನು ಹಾಳುಗೆಡವಲು ಕಾಶ್ಮೀರದಲ್ಲಿ ಅಮಾಯಕರನ್ನು ಹತ್ಯೆಗೈದ ಉಗ್ರಗಾಮಿಗಳ ಕೇಂದ್ರಗಳ ಮೇಲೆ ಭಾರತೀಯ ಸೇನೆ ‘ಆಪರೇಷನ್ ಸಿಂದೂರ್’ ಕಾರ್ಯಚರಣೆ ಮಾಡಿ ಸೂಕ್ತ ಪಾಠ ಕಲಿಸಿದೆ. ಈ ಸಂದರ್ಭ ಭಾರತೀಯರಾದ ನಾವೆಲ್ಲರೂ ನಮ್ಮ ಸೈನಿಕರಿಗೆ ನೈತಿಕ ಬೆಂಬಲ ನೀಡಬೇಕಾದ ಅನಿವಾರ್ಯತೆ ಇದೆ ಎಂದರು.

ಜುಮಾ ನಮಾಜಿನ ಬಳಿಕ ಜಮಾಯತ್ ಅಧ್ಯಕ್ಷ ಎಂ.ಎಚ್. ಅಬ್ದುಲ್ ರೆಹಮಾನ್ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.

ಪ್ರಸ್ತುತ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷಗಳು ನಡೆಯುತ್ತಿದ್ದು, ಭಾರತೀಯರ ಸಂರಕ್ಷಣೆಗಾಗಿ ಶತ್ರುಗಳೊಂದಿಗೆ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಭಾರತೀಯ ಸೈನಿಕರ ಯಶಸ್ಸಿಗೆ ಪ್ರಾರ್ಥಿಸಲಾಯಿತು.

ಈ ಸಂದರ್ಭ ಮೊಹಿಯದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.