ಸಾರಾಂಶ
ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಇಲ್ಲಿಗೆ ಸಮೀಪದ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಬುಧವಾರ ಜರುಗಿತು. ಆಡಳಿತ ಮಂಡಳಿ ಅಧ್ಯಕ್ಷ ಚೇನಂಡ ಈ. ಗಿರೀಶ್ ಪೂಣಚ್ಚ ಅಧ್ಯಕ್ಷತೆ ವಹಿಸಿದ್ದು, ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಇಲ್ಲಿಗೆ ಸಮೀಪದ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಬುಧವಾರ ಜರುಗಿತು.ಆಡಳಿತ ಮಂಡಳಿ ಅಧ್ಯಕ್ಷ ಚೇನಂಡ ಈ. ಗಿರೀಶ್ ಪೂಣಚ್ಚ ಅಧ್ಯಕ್ಷತೆ ವಹಿಸಿದ್ದು, ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.
ಕಾರ್ಯದರ್ಶಿ ಬಿದ್ದಂಡ ಎಂ ರಾಜೇಶ್ ಅಚ್ಚಯ್ಯ ಕ್ರೀಡಾ ಜ್ಯೋತಿ ಬೆಳಗಿಸಿದರು. ವಿದ್ಯಾರ್ಥಿ ಕವನ್ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ಮುಖ್ಯ ಅತಿಥಿಗಳಾಗಿ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಕ್ರೀಡಾಪಟುಗಳ ಪಥ ಸಂಚಲನದಲ್ಲಿ ವಂದನೆ ಸ್ವೀಕರಿಸಿದರು.
ಅತಿಥಿಗಳಾಗಿ ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಸ್ಥಳದಾನಿ ಬೊವ್ವೇರಿಯಂಡ ಮತ್ತು ಬಟ್ಟಿಯಂಡ ಕುಟುಂಬದ ಅಧ್ಯಕ್ಷರು, ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು, ವ್ಯವಸ್ಥಾಪಕರು, ಶಿಕ್ಷಕರು, ಸಿಬ್ಬಂದಿ ಪಾಲ್ಗೊಂಡಿದ್ದರು.ನರಿಯಂದಡ ಕೇಂದ್ರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಭವ್ಯ ಬಿ.ಎಸ್, ದೈಹಿಕ ಶಿಕ್ಷಣ ಶಿಕ್ಷಕ ಪಿ.ಬಿ ಪೊನ್ನಪ್ಪ ಮತ್ತು ಸಹ ಶಿಕ್ಷಕರು ನೇತೃತ್ವ ವಹಿಸಿದ್ದರು.