ಸಾರಾಂಶ
ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದ ಬಾಲಕರ ವಾಲಿಬಾಲ್ ಸ್ಪರ್ಧೆಯಲ್ಲಿ ಕೊಟ್ಟಮುಡಿಯ ಮರ್ಕಝ್ ಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿನ ಚೆರಿಯಪರಂಬು ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದ ಬಾಲಕರ ವಾಲಿಬಾಲ್ ಸ್ಪರ್ಧೆಯಲ್ಲಿ ಕೊಟ್ಟಮುಡಿಯ ಮರ್ಕಝ್ ಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.ಎಮ್ಮೆಮಾಡು ಪ್ರೌಢಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿತು. ಬಾಲಕಿಯರ ವಾಲಿಬಾಲ್ ಪಂದ್ಯದಲ್ಲಿ ಹೊದವಾಡ ಸರ್ಕಾರಿ ಪ್ರೌಢಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿದರೆ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ತಂಡ ದ್ವಿತೀಯ ಸ್ಥಾನ ಗಳಿಸಿತು.ಬಾಲಕರ ಥ್ರೋಬಾಲ್ ಟೂರ್ನಿಯಲ್ಲಿ ಎಮ್ಮೆಮಾಡು ಸರ್ಕಾರಿ ಪ್ರೌಢಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿದರೆ ಬಲ್ಲಮಾವಟಿಯ ನೇತಾಜಿ ವಿದ್ಯಾಸಂಸ್ಥೆಯ ತಂಡ ದ್ವಿತೀಯ ಸ್ಥಾನ ಗಳಿಸಿತು. ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಎಮ್ಮೆಮಾಡು ಸರ್ಕಾರಿ ಪ್ರೌಢಶಾಲೆಯ ತಂಡ ಪ್ರಥಮ ಸ್ಥಾನವನ್ನು ಹೊದವಾಡ ಸರ್ಕಾರಿ ಪ್ರೌಢಶಾಲೆ ತಂಡ ದ್ವಿತೀಯ ಸ್ಥಾನವನ್ನು ಗಳಿಸಿತು.
ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆಯ ತಂಡ ಪ್ರಥಮ ಸ್ಥಾನವನ್ನು, ಕಕ್ಕಬೆ ಪ್ರೌಢಶಾಲೆ ದ್ವಿತೀಯ ಸ್ಥಾನವನ್ನು ಗಳಿಸಿತು. ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಕಕ್ಕಬೆ ಪ್ರೌಢಶಾಲೆಯ ತಂಡ ಪ್ರಥಮ ಸ್ಥಾನವನ್ನು ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ತಂಡ ದ್ವಿತೀಯ ಸ್ಥಾನವನ್ನು ಗಳಿಸಿತು.ಶಾಲಾಶಿಕ್ಷಣ ಇಲಾಖೆ ಮತ್ತು ಪಾರಾಣೆ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಚೆರಿಯಪರಂಬು ಆಟದ ಮೈದಾನದಲ್ಲಿ ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟ ನಡೆಯಿತು. ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು.