ಸಾರಾಂಶ
ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಪೂಜಾ ಕೈಂಕರ್ಯ ನೆರವೇರಿಸಿ, ಉತ್ಸವದ ರಥದಲ್ಲಿ ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ರಥಬೀದಿ ಉತ್ಸವ ಹಾಗೂ ಪ್ರಾಕಾರೋತ್ಸವ ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಮಂಗಳವಾರ ಶ್ರೀ ನರಸಿಂಹಸ್ವಾಮಿ ಜಯಂತಿ ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು. ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವಿದ್ಯ, ತಧಿ ಆರಾಧನೆ ಸೇವೆ, ಸಹಸ್ರ ನಾಮಾರ್ಚನೆ, ಮಂಗಳಾರತಿ ನೆರವೇರಿಸಿ, ಪೂಜಿಸಲಾಯಿತು. ನಂತರ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಪೂಜಾ ಕೈಂಕರ್ಯ ನೆರವೇರಿಸಿ, ಉತ್ಸವದ ರಥದಲ್ಲಿ ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ರಥಬೀದಿ ಉತ್ಸವ ಹಾಗೂ ಪ್ರಾಕಾರೋತ್ಸವ ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ದೇವಾಲಯದ ಪ್ರಾಂಗಣ, ಶ್ರೀ ರಘುಪತಿ ದೇವಾಲಯ ಹಾಗೂ ರಥ ಬೀದಿಯಲ್ಲಿ ಶ್ರೀ ಸ್ವಾಮಿಯ ಭಕ್ತರು ಪಾನಕ ಹಾಗೂ ಕೋಸಂಬರಿ ವಿತರಿಸಿ, ಶಿ ಸ್ವಾಮಿಯ ಜಯಂತ್ಯುತ್ಸವದಲ್ಲಿ ಸಂಭ್ರಮಿಸಿದರು.