ಅಸಮಾನತೆ ವಿರುದ್ಧ ಹೋರಾಡಿದ ನಾರಾಯಣ ಗುರುಗಳು : ಶಾಸಕ ಕಾಮತ್

| Published : Aug 21 2024, 12:30 AM IST

ಅಸಮಾನತೆ ವಿರುದ್ಧ ಹೋರಾಡಿದ ನಾರಾಯಣ ಗುರುಗಳು : ಶಾಸಕ ಕಾಮತ್
Share this Article
  • FB
  • TW
  • Linkdin
  • Email

ಸಾರಾಂಶ

ಚಿಂತಕ ಹಾಗೂ ಲೇಖಕ ಅರವಿಂದ ಚೊಕ್ಕಾಡಿ ಉಪನ್ಯಾಸ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿನ ಅವ್ಯವಸ್ಥೆಯ ವಿರುದ್ಧ ಹೋರಾಡಿದವರು. ಶೂದ್ರರು, ಅಸ್ಪೃಶ್ಯರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಶ್ರಮಿಸಿದವರು ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ನಗರದ ಗೋಕರ್ಣನಾಥ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮೇಲ್ವರ್ಗದ ಜನರ ದೇವಾಲಯಗಳಿಗೆ ನಿಷೇಧ ಇದ್ದ ಕಾರಣ ಶೂದ್ರರಿಗಾಗಿ ದೇವಾಲಯಗಳನ್ನು ಕಟ್ಟಿಸಿದವರು ಗುರುಗಳು. ಸುಮಾರು ನೂರು ವರ್ಷಗಳ ಹಿಂದೆಯೇ ಮಹಿಳಾ ಶಿಕ್ಷಣವನ್ನು ಪ್ರೋತ್ಸಾಹಿಸಿದರು. ಜೀವನದಲ್ಲಿ ಧಾರ್ಮಿಕ ಆಧ್ಯಾತ್ಮಿಕ ಚಿಂತನೆಗೆ ಆಸಕ್ತಿ ಕೊಡುತ್ತ ಅಧ್ಯಯನಗಳಲ್ಲಿ ತೊಡಗಿ ಸಮಾಜವನ್ನು ಉತ್ತಮ ದಾರಿಗೆ ಕೊಂಡು ಹೋಗುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದರು.

ಚಿಂತಕ ಹಾಗೂ ಲೇಖಕ ಅರವಿಂದ ಚೊಕ್ಕಾಡಿ ಉಪನ್ಯಾಸ ನೀಡಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಅಧ್ಯಕ್ಷ ಸಾಯಿರಾಮ್, ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಸಂಚಾಲಕ ವಸಂತ್ ಕಾರಂದೂರು, ಪ್ರಾಂಶುಪಾಲ ಡಾ. ಜಯಪ್ರಕಾಶ್ ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು.