ಆಲ್ದೂರುಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ 20ನೇ ಶತಮಾನ ಕಂಡ ಮಾತೃ ಹೃದಯಿಗಳು ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.

ಗುಣನಾಥ ಸ್ವಾಮೀಜಿ ಪ್ರತಿಪಾದನೆ । ಆಲ್ದೂರು ಬಿಲ್ಲವ ಹೋಬಳಿ ಸಂಘದಿಂದ 172ನೇ ನಾರಾಯಣ ಗುರು ಜಯಂತ್ಯುತ್ಸವಕನ್ನಡಪ್ರಭ ವಾರ್ತೆ ಆಲ್ದೂರುಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ 20ನೇ ಶತಮಾನ ಕಂಡ ಮಾತೃ ಹೃದಯಿಗಳು ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.ಆಲ್ದೂರು ಬಿಲ್ಲವ ಹೋಬಳಿ ಸಂಘದಿಂದ ಭಾನುವಾರ ಆಯೋಜಿಸಿದ್ದ 172ನೇ ನಾರಾಯಣ ಗುರು ಜಯಂತ್ಯುತ್ಸವದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಪಂಚಭೂತಗಳಾದ ಭೂಮಿ, ಆಕಾಶ, ಅಗ್ನಿ, ವಾಯು ಮತ್ತು ಜಲ ಯಾವುದೇ ಒಂದು ಜನಾಂಗಕ್ಕೆ ಸೀಮಿತವಾಗಿಲ್ಲ. ಅವು ಎಲ್ಲರಿಗೂ ಸಮಾನವಾಗಿ ದೊರೆಯುತ್ತವೆ. ಆದರೆ ಮನುಷ್ಯ ಮಾತ್ರ ತನ್ನ ಸ್ವಾರ್ಥ ದಿಂದ ಭೇದಭಾವ ಸೃಷ್ಟಿಸಿಕೊಂಡಿದ್ದಾನೆ ಎಂದರು.ಕೇರಳದಲ್ಲಿ ದೇವಸ್ಥಾನ ಪ್ರವೇಶದ ನಿರ್ಬಂಧ ಮತ್ತು ಅಸ್ಪೃಶ್ಯತೆಯಂತಹ ಸಾಮಾಜಿಕ ಅನಿಷ್ಟಗಳ ವಿರುದ್ಧ ಚಿಂತನೆ ನಡೆಸಿದ ನಾರಾಯಣ ಗುರುಗಳು, ಹಿಂದುಳಿದ ಸಮುದಾಯಗಳೂ ಸ್ವಂತ ದೇವಸ್ಥಾನಗಳನ್ನು ನಿರ್ಮಿಸಿಕೊಳ್ಳಬೇಕು ಎಂಬ ಆಶಯಕ್ಕೆ ಪ್ರೇರಣೆ ನೀಡಿದರು. ಸಮಾಜದಲ್ಲಿನ ಮೇಲು-ಕೀಳು ಮತ್ತು ಕೀಳರಿಮೆಗಳ ಬಗ್ಗೆ ಕೇವಲ ಚಿಂತಿಸದೆ, ಬದಲಾ ವಣೆಗೆ ಪೂರಕವಾದ ಚಿಂತನೆ ಬೆಳೆಸಿದ್ದರಿಂದ ಸಾಮಾಜಿಕ ಪರಿವರ್ತನೆ ಸಾಧ್ಯವಾಯಿತು ಎಂದು ತಿಳಿಸಿದರು.ಬಾಲಗಂಗಾಧರನಾಥ ಸ್ವಾಮೀಜಿ, ನಾರಾಯಣ ಗುರುಗಳ ವಿಚಾರಧಾರೆಗಳಿಂದ ಪ್ರೇರಣೆ ಪಡೆದಿದ್ದರು. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಹಾಗೂ ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರಿಗೂ ಶಿಕ್ಷಣ ಒದಗಿಸುವ ಆಶಯಕ್ಕೆ ಈ ವಿಚಾರ ಧಾರೆಗಳು ಪ್ರೇರಕವಾಗಿದ್ದವು ಎಂದು ಹೇಳಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಂ. ಸತೀಶ್ ಮಾತನಾಡಿ ಮಹಾತ್ಮ ಗಾಂಧೀಜಿ ಮತ್ತು ರವೀಂದ್ರನಾಥ ಟಾಗೋರ್ ಅವರು ನಾರಾಯಣ ಗುರುಗಳ ತತ್ವಾದರ್ಶಗಳಿಂದ ಪ್ರಭಾವಿತರಾಗಿದ್ದರು. ಸ್ವಾತಂತ್ರ್ಯ ಬಂದು ಹಲವು ದಶಕ ಗಳು ಕಳೆದಿದ್ದರೂ ಎಲ್ಲ ಕ್ಷೇತ್ರಗಳಲ್ಲಿ ಎಲ್ಲ ಸಮುದಾಯಗಳಿಗೆ ಸಮಾನ ಪ್ರಾತಿನಿಧ್ಯ ದೊರೆತಿದೆಯೇ ಎಂಬ ಬಗ್ಗೆ ಆತ್ಮಾವ ಲೋಕನ ಮಾಡಿಕೊಳ್ಳಬೇಕು ಎಂದರು.ಬಾಲಗಂಗಾಧರನಾಥ ಸ್ವಾಮೀಜಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಎಲ್ಲ ಸಮುದಾಯಗಳ ಮಕ್ಕಳಿಗೂ ಶಿಕ್ಷಣ ದೊರೆಯು ವಂತೆ ಶ್ರಮಿಸಿದ ಫಲವಾಗಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳು ಜನಮನ್ನಣೆ ಗಳಿಸಿವೆ. ಸಮಾಜದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಎಲ್ಲರೂ ಆದ್ಯತೆ ನೀಡಬೇಕು ಎಂದು ಹೇಳಿದರು.

ಬಿಲ್ಲವ ಸಮಾಜದ ಮುಖಂಡರಾದ ಜನಾರ್ದನ ಪೂಜಾರಿ ಮತ್ತು ಬಂಗಾರಪ್ಪ ಸಮಾಜದ ಬೆಳವಣಿಗೆಗೆ ಕೊಡುಗೆ ನೀಡಿ ದ್ದಾರೆ. ಬಿ.ಕೆ. ಹರಿಪ್ರಸಾದ್ ಅವರು ಭವಿಷ್ಯದಲ್ಲಿ ಮುಖ್ಯಮಂತ್ರಿ ಆಗಲಿ ಎಂಬ ಆಶಯ ನಮ್ಮೆಲ್ಲರಲ್ಲಿದೆ ಎಂದರು.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಎಚ್.ಎಸ್. ಕೃಷ್ಣೇಗೌಡ ಮಾತನಾಡಿ, ಹಿರಿಯರನ್ನು ಗೌರವಿಸುವ, ಎಲ್ಲರನ್ನೂ ಪ್ರೀತಿಸುವ ಸಂಸ್ಕೃತಿ ಹೊಂದಿರುವ ಬಿಲ್ಲವ ಸಮಾಜದ ಧ್ಯೇಯಗಳು ಶ್ಲಾಘನೀಯ ಎಂದರು.ವಲಯ ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ಬಿ. ಅಶೋಕ್ ಮಾತನಾಡಿ ಬಿಲ್ಲವ ಸಮಾಜ ಎಲ್ಲ ಸಮುದಾಯಗಳೊಂದಿಗೆ ಸಾಮರಸ್ಯದಿಂದ ಬೆರೆಯುತ್ತಿದೆ. ಆಲ್ದೂರಿನಲ್ಲಿ ಸಮುದಾಯ ಭವನ ನಿರ್ಮಿಸಿ ಸಂಘವನ್ನು ಅಚ್ಚುಕಟ್ಟಾಗಿ ನಿರ್ವಹಿ ಸುತ್ತಿರುವುದು ನಮಗೂ ಸಂಘಟನೆ ಕಟ್ಟಲು ಪ್ರೇರಣೆ ನೀಡಿದೆ ಎಂದರು.ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮಾತನಾಡಿ ಬಿಲ್ಲವ ಸಮಾಜದ ನಿವೇಶನವನ್ನು ಅಧಿಕಾರಿ ಗಳು ವಶಕ್ಕೆ ಪಡೆದಿರುವುದಾಗಿ ತಿಳಿಸಿ, ಅದನ್ನು ಮರಳಿ ಪಡೆಯಲು ಸಮುದಾಯದವರು ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಜಿಪಂ, ತಾಪಂ ಹಾಗೂ ಗ್ರಾಪಂ ಸ್ಥಾನಗಳ ಮೀಸಲಾತಿ ಹಂಚಿಕೆ ಸರಿಯಾಗಿಲ್ಲ ಎಂದು ಎಚ್.ಎಂ. ಸತೀಶ್ ಅಸಮಾಧಾನ ವ್ಯಕ್ತಪಡಿಸಿ, ಈ ಕುರಿತು ಆಕ್ಷೇಪಣೆ ಸಲ್ಲಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಕೆ.ಎಲ್. ಕುಮಾರ್, ಕಾರ್ಯಕ್ರಮದ ಆಯೋಜನೆಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ವಿಶ್ವನಾಥ, ಚಿಲಿಂಬಿ ಶ್ರೀಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ, ಅಂಬೇಡ್ಕರ್ ಹೋರಾಟ ವೇದಿಕೆ ಗೌರವಾಧ್ಯಕ್ಷ ಹೊನ್ನಪ್ಪ, ಅಧ್ಯಕ್ಷ ಎಚ್. ನವರಾಜು, ಬಿಜೆಪಿ ಆಲ್ದೂರು ಹೋಬಳಿ ಘಟಕದ ಅಧ್ಯಕ್ಷ ನಾಗೇಶ್ ಭೂತನಕಾಡು, ಮಾಜಿ ಪಂಚಾಯಿತಿ ಉಪಾಧ್ಯಕ್ಷ ಎ.ಬಿ. ಭರತ್, ಜಿಲ್ಲಾ ಬಿಲ್ಲವ ಸಮಾಜದ ಅಧ್ಯಕ್ಷ ಕೆ. ರಾಜು, ದೊಡ್ಡಮಾಗರವಳ್ಳಿ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಲ್. ಶೇಖರ್, ಮಾಜಿ ಸದಸ್ಯ ಕೆ.ಎಲ್. ರಾಜು, ಸಂಘದ ಮಾಜಿ ಉಪಾಧ್ಯಕ್ಷ ಸೀತಾರಾಮ ಪೂಜಾರಿ, ಬಿಲ್ಲವ ಬ್ರಿಗೇಡ್ ಅಧ್ಯಕ್ಷ ದಿನೇಶ್ ಕೋಟ್ಯಾನ್, ಮಹಿಳಾ ಘಟಕದ ಅಧ್ಯಕ್ಷೆ ಜಾನಕಿ ಬನ್ನೂರು, ಸಮುದಾಯದ ಮುಖಂಡರಾದ ಮನೋಜ್ ಕುಮಾರ್, ಯುವ ವೇದಿಕೆ ಅಧ್ಯಕ್ಷ ರಮೇಶ್, ಪ್ರಕಾಶ್ ಬಂಗೇರ, ರಾಘವೇಂದ್ರ, ಮನೋಜ್ ಪೂಜಾರಿ, ಕೇಶವ ಪೂಜಾರಿ, ಹೆಡದಾಳು ಸಂಪತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.