ಸಾರಾಂಶ
ಮಲ್ಪೆ ಶ್ರೀ ವಿಠೋಭ ಭಜನಾ ಮಂದಿರ, ಬಿಲ್ಲವ ಸಮಾಜ ಸೇವಾ ಸಂಘ ಮಲ್ಪೆ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಅವರ ೧೭೦ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಮಲ್ಪೆ
ಇಲ್ಲಿನ ಶ್ರೀ ವಿಠೋಭ ಭಜನಾ ಮಂದಿರ, ಬಿಲ್ಲವ ಸಮಾಜ ಸೇವಾ ಸಂಘ ಮಲ್ಪೆ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಅವರ ೧೭೦ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ತಲ್ಲೂರು, ಶ್ರೀ ನಾರಾಯಣಗುರುಗಳ ತತ್ವಾದರ್ಶಗಳು ಸದಾ ಸ್ಮರಣೀಯ ಮತ್ತು ಅವುಗಳನ್ನು ಜೀವನದಲ್ಲಿ ಪಾಲಿಸಬೇಕಾದ ಅಗತ್ಯ ಇಂದು ಹೆಚ್ಚಾಗಿದೆ. ಕರಾವಳಿಯುದ್ದಕ್ಕೂ ಶ್ರೀ ನಾರಾಯಣಗುರುಗಳ ತತ್ವಾದರ್ಶದಲ್ಲಿ ಹುಟ್ಟಿರುವ ಸಂಘಸಂಸ್ಥೆಗಳ, ವಿದ್ಯಾಕೇಂದ್ರಗಳ ಸೇವಾ ಕಾರ್ಯಗಳನ್ನು ಕಾಣುತ್ತಿದ್ದೇವೆ. ಅವುಗಳಿಂದ ಸಾಮಾಜಿಕ, ಶೈಕ್ಷಣಿಕ ಪರಿವರ್ತನೆ ಸಾಧ್ಯವಾಗಿದೆ ಎಂದರು.ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಗೋಪಾಲ ಸಿ. ಬಂಗೇರ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ದಿನೇಶ್ ಜಿ. ಸುವರ್ಣ, ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ರಘುರಾಮ್ ಸುವರ್ಣ, ನಾರಾಯಣಗುರು ಸೇವಾ ದಳದ ಸಂಚಾಲಕ ದೀಪಕ್ ಕೋಟ್ಯಾನ್, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ವಾರಿಜಾ ಮಧುಸೂದನ್ ಮೊದಲಾದವರು ಉಪಸ್ಥಿತರಿದ್ದರು.