ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ನಾರಾಯಣಸ್ವಾಮಿಗೆ ಗೆಲ್ಲಿಸಿ

| Published : May 28 2024, 01:11 AM IST

ಸಾರಾಂಶ

ವಿಧಾನ ಪರಿಷತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರ ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌, ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನಗರದ ವಿವಿಧ ಕಾಲೇಜು, ಶಾಲೆಗಳಿಗೆ ತೆರಳಿ, ಪ್ರಚಾರ ನಡೆಸಿದ್ದಾರೆ.

- ಮಾಜಿ ಸಚಿವ ಎಸ್.ಎ. ರವೀಂದ್ರನಾಥ, ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪ್ರಚಾರ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ವಿಧಾನ ಪರಿಷತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರ ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌, ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನಗರದ ವಿವಿಧ ಕಾಲೇಜು, ಶಾಲೆಗಳಿಗೆ ತೆರಳಿ, ಪ್ರಚಾರ ನಡೆಸಿದರು.

ನಗರದ ಯುಬಿಡಿಟಿ ಕಾಲಜು, ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪಿಯು ಕಾಲೇಜು ಹಾಗೂ ಸರ್ಕಾರಿ ಪಿಯು ಕಾಲೇಜಿನಲ್ಲಿ ಮತಯಾಚಿಸಲಾಯಿತು.

ಗಾಯತ್ರಿ ಸಿದ್ದೇಶ್ವರ ಮಾತನಾಡಿ, ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಮೌಲ್ಯಾಧಾರಿತ ಶಿಕ್ಷಣಕ್ಕೆ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲ್ಲಿಸಬೇಕು. ವೈ.ಎ.ನಾರಾಯಣಸ್ವಾಮಿ ಮೇಲ್ಮನೆಯಲ್ಲಿ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡಿದ್ದು, ಮುಂದೆಯೂ ಮತ್ತಷ್ಟು ಕೆಲಸವನ್ನು ಮಾಡಲಿದ್ದಾರೆ ಎಂದರು.

ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಮೌಲ್ಯಾಧಾಾರಿತ ಶಿಕ್ಷಣಕ್ಕೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ರಾಜ್ಯದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಮತದಾರರು ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲ್ಲಿಸಬೇಕು. ಈಗಿನ ಶಿಕ್ಷಣದಲ್ಲಿ ಕಾಂಗ್ರೆಸ್ ಸರ್ಕಾರದ ಅನಾವಶ್ಯಕ ಹಸ್ತಕ್ಷೇಪದಿಂದಾಗಿ ಶಿಕ್ಷಣ ನೀತಿಯಲ್ಲಿ ಹಾಗೂ ಪರೀಕ್ಷಾ ವ್ಯವಸ್ಥೆಯು ಗೊಂದಲದ ಗೂಡಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ವೈಫಲ್ಯಗೊಂಡಿದೆ ಎಂದು ದೂರಿದರು.

ಕಾಂಗ್ರೆಸ್ ಸರ್ಕಾರದ ವೈಫಲ್ಯ, ಶಿಕ್ಷಣ ಕ್ಷೇತ್ರದ ಅನಗತ್ಯ ಹಸ್ತಕ್ಷೇಪದಿಂದಾಗಿ ಶಿಕ್ಷಣದಲ್ಲಿ ವ್ಯತ್ಯಾಸವಾಗುತ್ತಿದೆ. ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರಲ್ಲಿ ತೀವ್ರ ಗೊಂದಲ ಉಂಟಾಗುತ್ತಿದೆ. ಇದೆಲ್ಲದರಿಂದ ಪರಿಹಾರಕ್ಕಾಗಿ ವಿಧಾನ ಪರಿಷತ್‌ನ ಚುನಾವಣೆಯಲ್ಲಿ ನಮ್ಮ ಎನ್‌ಡಿಎ ಅಭ್ಯರ್ಥಿ ನಾರಾಯಣಸ್ವಾಮಿ ಅವರು ಮೂಲತಃ ಶಿಕ್ಷಕರಾಗಿದ್ದಾರೆ. ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಹುಡುಕುವಲ್ಲಿ ಸದಾ ಮುಂಚೂಣಿಯಲ್ಲಿರುವ ವ್ಯಕ್ತಿ. ಇಂತಹವರಿಗೆ ಕ್ಷೇತ್ರದ ಮತದಾರರು ಪ್ರಥಮ ಪ್ರಾಶಸ್ತ್ಯದ ಮತ ನೀಡಿ, ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಶಿಕ್ಷಣ ಇಲಾಖೆಯಲ್ಲಿ ಹಲವಾರು ತಪ್ಪು ನಿರ್ಣಯ ಕೈಗೊಂಡು, ಶಿಕ್ಷಣ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಹ ಶಿಕ್ಷಣ ವ್ಯವಸ್ಥೆ ಲೋಪದೋಷ ಹೆಚ್ಚಾಗಲು ಕಾರಣರಾಗಿದ್ದಾರೆ. ಶಾಲಾ ಪಠ್ಯಕ್ರಮ ಬದಲಾವಣೆ ನಿರ್ಧಾರವು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ದ್ವೇಷದ ಕ್ರಮವಾಗಿದೆ ಎಂದು ಆರೋಪಿಸಿದರು.

ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ, ಮಾಜಿ ಮೇಯರ್ ಎಸ್.ಟಿ. ವೀರೇಶ, ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ, ಸದಸ್ಯ ಆರ್.ಶಿವಾನಂದ, ಮುಖಂಡರಾದ ಕೊಂಡಜ್ಜಿ ಜಯಪ್ರಕಾಶ, ಎಚ್.ಎನ್. ಶಿವಕುಮಾರ, ಜಯಪ್ರಕಾಶ, ಎನ್.ಸಿ.ಸಾಗರ್ ಇತರರು ಇದ್ದರು.

- - -

ಬಾಕ್ಸ್‌ * ವೈಎಎನ್‌ಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿದೆ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ಮಾತನಾಡಿ, ವಿಧಾನ ಪರಿಷತ್‌ ಆಗ್ನೇಯ ಶಿಕ್ಷಕರ ಸದಾ ಬಿಜೆಪಿ ಪರವಾಗಿರುವಂತಹ ಕ್ಷೇತ್ರ. ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವೈ.ಎ.ನಾರಾಯಣ ಸ್ವಾಮಿ ಮೂಲತಃ ಶಿಕ್ಷಕ ವೃತ್ತಿಯವರು. ಹಾಗಾಗಿ, ಶಿಕ್ಷಣ ಕ್ಷೇತ್ರ, ಶಿಕ್ಷಕ-ಶಿಕ್ಷಕಿಯರ ಸಮಸ್ಯೆಗಳ ಬಗ್ಗೆ ಸಾಕಷ್ಟು ಅರಿವಿದೆ. ಸದಾ ಶಿಕ್ಷಣ ಕ್ಷೇತ್ರದ ಏಳಿಗೆ, ಶಿಕ್ಷಕ ವರ್ಗದ ಹಿತಕಾಯುವ ಕೆಲಸ ಮಾಡುತ್ತಾ ವೈ.ಎ. ನಾರಾಯಣಸ್ವಾಮಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಕ್ಷೇತ್ರಕ್ಕೆ ಪುನರಾಯ್ಕೆ ಮಾಡುವಂತೆ ಮತದಾರರಿಗೆ ಕೋರಿದರು.

- - - -27ಕೆಡಿವಿಜಿ1:

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ ನೇತೃತ್ವದಲ್ಲಿ ದಾವಣಗೆರೆ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರ ಪ್ರಚಾರ ನಡೆಸಲಾಯಿತು.