ಸಾರಾಂಶ
ಗ್ರಾಮೀಣ ವಿದ್ಯಾರ್ಥಿಗಳ ಬೌದ್ಧಿಕ, ಆರೋಗ್ಯ ಮತ್ತು ಶಿಕ್ಷಣಕ್ಕೆ ನರೇಗಾ ಯೋಜನೆ ಹೆಚ್ಚು ಮಹತ್ವ ನೀಡುತ್ತಿದೆ. ಜೊತೆಗೆ ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುತ್ತಿದೆ. ರೈತರು ತಮ್ಮ ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಎರೆ ಹುಳು ಘಟಕ, ದನದ ಕೊಟ್ಟಿಗೆ ಮುಂತಾದ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ
ಚಿಕ್ಕಬಳ್ಳಾಪುರ/ಗುಡಿಬಂಡೆ
ನರೇಗಾ ಯೋಜನೆ ಗ್ರಾಮೀಣ ಜನರ ಬದುಕಿನಲ್ಲಿ ಉತ್ತಮವಾದ ಗುಣಾತ್ಮಕ ಬದಲಾವಣೆ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ರಾಮಾಂಜನಪ್ಪ ತಿಳಿಸಿದರು.ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಪಂ ಗುರುವಾರ ಹಮ್ಮಿಕೊಂಡಿದ್ದ ನರೇಗಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ನರೇಗಾ ಯೋಜನೆಯಡಿ ದಿನಕ್ಕೆ 349 ಕೂಲಿ ನೀಡಲಾಗುತ್ತಿದೆ. ಸರ್ಕಾರ ಗ್ರಾಮೀಣ ಕುಟುಂಬಗಳು ಸುಸ್ಥಿತಿಗೆ ಬರುವ ಯೋಜನೆ ಹಾಕಿಕೊಂಡಿದೆ. ಸಾಕಷ್ಟು ಬಡ ಕುಟುಂಬಗಳಿಗೆ ಅನುಕೂಲ ಕಲ್ಪಿಸಿದೆ ಎಂದರು.
ಖಾತರಿ ನಡೆ ಸಬಲತೆಯಡೆಗೆಇದರ ಜೊತೆಗೆ ಕಾರ್ಮಿಕರಿಗೆ ವಿಮೆ, ಈ ಶ್ರಮ್ ಕಾರ್ಡ್ ಸೌಲಭ್ಯ ಒದಗಿಸಿದ್ದು ಅದರ ಪ್ರಯೋಜನ ಪಡೆದುಕೊಳ್ಳಬೇಕು. ಉದ್ಯೋಗ ಖಾತರಿ ನಡೆ ಸಬಲತೆಯಡೆಗೆ ಎಂದಾಗಿದೆ. ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ, ಬೇಡಿಕೆಯನ್ನು ಆಧರಿಸಿ ಕೆಲಸ ಒದಗಿಸುವ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ ತರಲಾಗಿದೆ ಎಂದರು.
ಪಿಡಿಒ ಅರ್ಚನಾ ಮಾತನಾಡಿ, ನರೇಗಾ ಯೋಜನೆ ಗ್ರಾಮೀಣ ಜನರಿಗೆ ನೋಂದಾಯಿತ ಪ್ರತಿ ಕುಟುಂಬಕ್ಕೆ ಕನಿಷ್ಠ 100 ದಿನಗಳ ಕೆಲಸ ನೀಡುತ್ತಿದೆ. ತಾಲೂಕಿನಲ್ಲಿ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಗ್ರಾಮೀಣ ಭಾಗದ ಸಮಗ್ರ ಶಾಲಾ ಅಭಿವೃದ್ಧಿಯಡಿ ಆಟದ ಮೈದಾನ, ತಡೆಗೋಡೆ ನಿರ್ಮಾಣ, ಮಳೆ ನೀರಿನ ಕೊಯ್ಲು, ಪೌಷ್ಟಿಕ ಕೈತೋಟ, ಶಾಲಾ ಅಡುಗೆ ಕೋಣೆ ಮತ್ತು ಭೋಜನಾಲಯ, ಆಟದ ಅಂಕಣಗಳ ನಿರ್ಮಾಣ ಸೇರಿದಂತೆ ವಿವಿಧ ಸಮಾಜ ಮುಖಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.ಆರೋಗ್ಯ ,ಶಿಕ್ಷಣಕ್ಕೆ ಒತ್ತು
ಗ್ರಾಮೀಣ ವಿದ್ಯಾರ್ಥಿಗಳ ಬೌದ್ಧಿಕ, ಆರೋಗ್ಯ ಮತ್ತು ಶಿಕ್ಷಣಕ್ಕೆ ನರೇಗಾ ಯೋಜನೆ ಹೆಚ್ಚು ಮಹತ್ವ ನೀಡುತ್ತಿದೆ. ಜೊತೆಗೆ ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುತ್ತಿದೆ. ರೈತರು ತಮ್ಮ ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಎರೆ ಹುಳು ಘಟಕ, ದನದ ಕೊಟ್ಟಿಗೆ ಮುಂತಾದ ಕಾಮಗಾರಿಗಳನ್ನು ಗ್ರಾಮ ಪಂಚಾಯತಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆಯ ಸಹಯೋಗದಲ್ಲಿ ಬಳಸಿಕೊಳ್ಳು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲ, ನರೇಗಾ ತಾಲೂಕು ತಾಂತ್ರಿಕ ಸಿಬ್ಬಂದಿಗಳಾದ ಅಕಿಲ್ ಕೃಷ್ಣ, ಮುರಳಿ, ಗೋಪಿ, ರಾಮಾಂಜಿ, ರಜಿತ, ವಿದ್ಯಾಶ್ರೀ, ಹಾಗೂ ಎಲ್ಲ ಗ್ರಾಮ ಕಾಯಕ ಮಿತ್ರರು, ನರೇಗಾ ಫಲಾನುಭವಿಗಳು ಇದ್ದರು.