ಸಾರಾಂಶ
ಬಸವನಬಾಗೇವಾಡಿ: ತಾಲೂಕಿನ ಮುತ್ತಗಿ ಗ್ರಾಪಂ ವ್ಯಾಪ್ತಿಯ ಮುತ್ತಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಾಣವಾದ ಅಮೃತ ಸರೋವರ ಕಾಮಗಾರಿ ಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ಮತ್ತು ಮುತ್ತಗಿ ಗ್ರಾಪಂ ಅಧ್ಯಕ್ಷೆ ನೀಲಾ ಪಾಟೀಲ ಅವರು ಚಾಲನೆ ನೀಡಿದರು.
ಬಸವನಬಾಗೇವಾಡಿ:
ತಾಲೂಕಿನ ಮುತ್ತಗಿ ಗ್ರಾಪಂ ವ್ಯಾಪ್ತಿಯ ಮುತ್ತಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಾಣವಾದ ಅಮೃತ ಸರೋವರ ಕಾಮಗಾರಿ ಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ಮತ್ತು ಮುತ್ತಗಿ ಗ್ರಾಪಂ ಅಧ್ಯಕ್ಷೆ ನೀಲಾ ಪಾಟೀಲ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ತಾಪಂ ಇಒ ಪ್ರಕಾಶ ದೇಸಾಯಿ ಮಾತನಾಡಿ, ಪರಿಸರ ದಿನಾಚರಣೆಯ ಮಹತ್ವ ಮತ್ತು ಗ್ರಾಮದಲ್ಲಿನ ಜನರು ತಮ್ಮ ಜಮೀನಿನಲ್ಲಿ ಸಸಿ ನೆಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಪರಿಸರ ದಿನಾಚರಣೆಯ ಬಗ್ಗೆ ಸೂಕ್ತವಾದ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕವಿತಾ ಬಡಿಗೇರ, ಗ್ರಾಮ ಪಂಚಾಯಿತಿ ಸದಸ್ಯರಾದ ಕನಕಪ್ಪ ಬಂಡಿವಡ್ಡರ, ಮಹಿಬೂಬ ಚಪ್ಪರಬಂದ, ಕರಿಯಪ್ಪ ಗುಡಿಮನಿ, ಅರ್ಜುನ ಶಿಲ್ಪಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಎಸ್. ಬಡಿಗೇರ, ಗ್ರಾಮ ಪಂಚಾಯತ ಎಲ್ಲ ಸಿಬ್ಬಂದಿ ವರ್ಗ ಇತರರು ಇದ್ದರು.