ಉಡುಪಿ: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಆದೇಶದಂತೆ ಉಡುಪಿ ಜಿಲ್ಲೆಯ ಬೂತ್, ಗ್ರಾಮಾ, ಬ್ಲಾಕ್ ಮತ್ತು ಜಿಲ್ಲಾ ಮಟ್ಟಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮನರೇಗಾ ಯೋಜನೆ ಬಚಾವೋ ಪ್ರತಿಭಟನೆಗಳನ್ನು ನಡೆಸಲಾಗಿದೆ. 24 ರಂದು ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಗ್ರಾಮಾಂತರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರ ಪಾದಯಾತ್ರೆ ನಡೆಸಿ, ಮನರೇಗಾ ಯೋಜನೆಯನ್ನು ಉಳಿಸಿಕೊಳ್ಳುವ ಬೇಡಿಕೆಯೊಂದಿಗೆ ಕೇಂದ್ರ ಸರ್ಕಾರದ ಗಮನಸೆಳೆಯಲು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಲಾಗುತ್ತದೆ. ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪಕ್ಷದ ಪ್ರಮುಖರಾದ ದಿನೇಶ್ ಪುತ್ರನ್, ಮುರಲಿ ಶೆಟ್ಟಿ, ಭಾಸ್ಕರ ರಾವ್ ಕಿದಿಯೂರು, ಅಣ್ಣಯ್ಯ ಸೇರಿಗಾರ್, ಜ್ಯೋತಿ ಹೆಬ್ಬಾರ್, ಬಿ. ಕುಶಲ ಶೆಟ್ಟಿ, ರಮೇಶ್ ಕಾಂಚನ್, ಮಹಾಬಲ ಕುಂದರ್, ಪ್ರಖ್ಯಾತ ಶೆಟ್ಟಿ, ಯತೀಶ್ ಕರ್ಕೆರ, ಉದ್ಯಾವರ ನಾಗೇಶ್ ಕುಮಾರ್ ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.