ಸಾರಾಂಶ
ಗ್ರಾಮೀಣ ಭಾಗದ ಜನರಿಗೆ ನರೇಗಾ ಯೋಜನೆ ವರದಾನವಾಗಿದ್ದು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯ್ತಿ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಅವರು ಹೇಳಿದರು.
ಕನ್ನಡಪ್ರಭ ವಾರ್ತೆ ಅಫಜಲ್ಪುರ
ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ನರೇಗಾ ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ನರೇಗಾ ಯೋಜನೆ ವರದಾನವಾಗಿದ್ದು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯ್ತಿ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಅವರು ಹೇಳಿದರು.ಅಫಜಲ್ಪುರ ತಾಲೂಕಿನ ಬಳೂರ್ಗಿ ಗ್ರಾಮದಲ್ಲಿ ಗ್ರಾಮಸ್ಥರಿಗೆ ಉದ್ಯೋಗ ಖಾತ್ರಿ ಯೋಜನೆ ಕುರಿತು ಮಾಹಿತಿ ನೀಡಿ ಮಾತನಾಡಿದರು.
ತಾ.ಪಂ. ಸಹಾಯಕ ನಿರ್ದೇಶಕ ರಮೇಶ ಪಾಟೀಲ ಮಾತನಾಡಿ, ನರೇಗಾ ಯೋಜನೆ ಅಡಿಯಲ್ಲಿ 100 ದಿನಗಳ ಕಾಲ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮದ ಜನರು ಸ್ವಂತ ಊರಲ್ಲೇ ಕೂಲಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಹಾಂತೇಶ ಸಾಲಿಮಠ, ರಾಜಶೇಖರ, ಪಾಟೀಲ ಕಾರ್ಯದರ್ಶಿ ಸೋಮಶೇಖರ ಪೂಜಾರಿ ಡಿಇಒ ಗೌರಿಶಂಕರ ಐಇಸಿ ಸಂಯೋಜಕಿ ಶೋಭಾ ಕಣಮಸ್ಕರ ಗ್ರಾಮ ಕಾಯಕ ಮಿತ್ರರು ಕೂಲಿ ಕಾರ್ಮಿಕರಿದ್ದರು.