ಸಾರಾಂಶ
ಬಾಗಲಕೋಟೆ: ತಾಲೂಕು ಬೆನಕಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಮನ್ನಿಕಟ್ಟಿ ಗ್ರಾಮದ ಅಮೃತ ಸರೋವರ ದಡದಲ್ಲಿ ನರೇಗೋತ್ಸವ ಕಾರ್ಯಕ್ರಮ ಜರುಗಿತು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ, ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆ ಕುರಿತು ಮಾಹಿತಿ ನೀಡಿದರು, ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಸಹ ಜರುಗಿತು. ಹಾಗೂ ನರೇಗಾ ಯೋಜನೆಯಡಿಯಲ್ಲಿ ನೂರು ದಿನಗಳಲ್ಲಿ ಕೂಲಿ ನಿರ್ವಹಿಸಿದ ಕೂಲಿ ಕಾರ್ಮಿಕರಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ತಾಲೂಕು ಬೆನಕಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಮನ್ನಿಕಟ್ಟಿ ಗ್ರಾಮದ ಅಮೃತ ಸರೋವರ ದಡದಲ್ಲಿ ನರೇಗೋತ್ಸವ ಕಾರ್ಯಕ್ರಮ ಜರುಗಿತು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ, ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆ ಕುರಿತು ಮಾಹಿತಿ ನೀಡಿದರು, ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಸಹ ಜರುಗಿತು. ಹಾಗೂ ನರೇಗಾ ಯೋಜನೆಯಡಿಯಲ್ಲಿ ನೂರು ದಿನಗಳಲ್ಲಿ ಕೂಲಿ ನಿರ್ವಹಿಸಿದ ಕೂಲಿ ಕಾರ್ಮಿಕರಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಬೆನಕಟ್ಟಿ ಗ್ರಾಪಂ ಅಧ್ಯಕ್ಷೆ ಬಾಲವ್ವ ಮಾದರ, ಸದಸ್ಯರಾದ ಹನಮಂತ ಪಲ್ಲೇದ, ಮುತ್ತಪ್ಪ ಹುನಸಿಕಟ್ಟಿ, ಮಲ್ಲಮ್ಮ ಜುಮನಾಳ, ಪಾರ್ವತೆವ್ವ ಮಾದರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಂ.ರೇವಡಿ, ಸಹಾಯಕ ನಿರ್ದೇಶಕ ನವೀನ ಅರಳಿಮಟ್ಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.