ಸಾರಾಂಶ
- ಜಿಲ್ಲಾ ಕಾಂಗ್ರೆಸ್, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಮಂಜಪ್ಪ ಆರೋಪ
- - -ಕನ್ನಡಪ್ರಭ ವಾರ್ತೆ ಹೊನ್ನಾಳಿ
ದೇಶದಲ್ಲಿ ನಡೆದ ಚುನಾವಣೆಗಳಲ್ಲಿ ಮತಗಳ್ಳತನ ಹಾಗೂ ಸುಳ್ಳು ಭರವಸೆಗಳಿಂದಾಗಿ ಬಿಜೆಪಿಯ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಮತಗಳ್ಳತನ ವಿರುದ್ಧ ದೊಡ್ಡ ಹೋರಾಟನ್ನೇ ಆರಂಭಿಸಿದ್ದಾರೆ. ಅವರ ಸೂಚನೆಯಂತೆ ರಾಜ್ಯದಲ್ಲಿ ಕೂಡ ಮತಗಳ್ಳತನ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಸಹಿ ಸಂಗ್ರಹ ಕಾರ್ಯ ನಡೆಸಲಾಗುತ್ತಿದೆ. ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.ತಾಲೂಕು ಕಾಂಗ್ರೆಸ್ ಪಕ್ಷದಿಂದ ಮತಗಳ್ಳತನ ಖಂಡಿಸಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಹಾಗೂ ಸಹಿ ಸಂಗ್ರಹ ಅಭಿಯಾನದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕನಿಷ್ಠ 2 ಲಕ್ಷ ಹಾಗೂ ತಾಲೂಕಿನಲ್ಲಿ ಕನಿಷ್ಠ 25 ಸಾವಿರಕ್ಕೂ ಹೆಚ್ಚಿನ ಸಹಿ ಸಂಗ್ರಹ ಮಾಡಬೇಕು. ಇದಕ್ಕಾಗಿ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಪಕ್ಷದ ಹಿಂದುಳಿತ ವರ್ಗಗಳ ರಾಜ್ಯ ಉಪಾಧ್ಯಕ್ಷ ಎಚ್.ಎ. ಉಮಾಪತಿ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಹಿ ಸಂಗ್ರಹ ಮಾಡಬೇಕು. ಹೋಬಳಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಗೆ ಬರುವ ಮುಖಂಡರು ಸಹಿ ಸಂಗ್ರಹ ಮಾಡುವ ಜವಾಬ್ದಾರಿ ನಿರ್ವಹಿಸಬೇಕು ಎಂದು ತಿಳಿಸಿದರು.ಕಾಂಗ್ರೆಸ್ ತಾಲೂಖು ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಸಾಸ್ವೇಹಳ್ಳಿ ಬ್ಲಾಕ್ ಅಧ್ಯಕ್ಷ ಆರ್.ನಾಗಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಜಿ.ವಿಶ್ವನಾಥ್, ಎ.ಐ.ಸಿ.ಸಿ. ಸದಸ್ಯ ಡಾ. ಎಲ್.ಈಶ್ವರ ನಾಯ್ಕ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ಎ. ಗದ್ದಿಗೇಶ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ರವೀಶ್, ಆಶಾ, ಉಷಾ ಮಾತನಾಡಿದರು.
ಪುರಸಭೆ ಅಧ್ಯಕ್ಷ ಮೈಲಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಮನೋಜ್ ವಾಲಜ್ಜಿ, ಮಧುಗೌಡ, ಸಾಸ್ವೇಹಳ್ಳಿ ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕುಳಗಟ್ಟೆ ಶೇಖರಪ್ಪ, ವಿಜೇಂದ್ರಪ್ಪ, ಬೆನಕನಹಳ್ಳಿ ವೀರಣ್ಣ, ರೈತ ಮುಖಂಡ ಜಗದೀಶ್, ಎಚ್.ಬಿ.ಅಣ್ಣಪ್ಬ, ಕಾಯಿಬುರುಡೆ ಸಣ್ಣಸಿದ್ದಪ್ಪ ಇನ್ನಿತರರು ಇದ್ದರು.- - -
(ಬಾಕ್ಸ್)* ಪ್ರಜಾತಂತ್ರ ವ್ಯವಸ್ಥೆಗೆ ಬಿಜೆಪಿ ಅಪಮಾನ: ಶಾಸಕ ಶಾಂತನಗೌಡ
ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿ, ಭಾರತ ಜಗತ್ತಿನಲ್ಲಿಯೇ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರವಾಗಿದೆ. ಇದಕ್ಕೆ ಅಪಚಾರವಾಗದಂತೆ ಚುನಾವಣೆಗಳನ್ನು ನಡೆಸಿ ಮತದಾರರಿಂದ ಪ್ರಮಾಣಿಕವಾದ ಜನಾದೇಶ ಪಡೆದು ಅಧಿಕಾರ ನಡೆಸಬೇಕು. ಆದರೆ ಬಿಜೆಪಿಯವರು ಮತಗಳ್ಳತನ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ಅಪಮಾನ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದರು. ಈ ವಿಚಾರವನ್ನು ಪ್ರತಿ ಗ್ರಾಮಗಳಲ್ಲಿ ಮನೆ ಮನೆಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನಜಾಗೃತಿ ಮೂಡಿಸಿ ಸಹಿ ಸಂಗ್ರಹ ಮಾಡಿ, ಜಿಲ್ಲೆಯಲ್ಲಿಯೇ ನಮ್ಮ ಹೊನ್ನಾಳಿ ಕ್ಷೇತ್ರ ಸಹಿ ಸಂಗ್ರಹದಲ್ಲಿ ಪ್ರಥಮ ಸ್ಥಾನದಲ್ಲಿರಬೇಕು. ಇದಕ್ಕಾಗಿ ನಾವೆಲ್ಲಾ ಶ್ರಮಿಸೋಣ. ಈ ಕೆಲಸದಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಲಿದ್ದೇನೆ. ಇದೇ ರೀತಿ ಹೊನ್ನಾಳಿ, ನ್ಯಾಮತಿ ತಾಲೂಕುಗಳಲ್ಲಿನ ಎಲ್ಲ ಕಾಂಗ್ರೇಸ್ ಮುಖಂಡರು ತಮ್ಮ ಸಮೀಪದ ಗ್ರಾಮಗಳಿಗೆ ಭೇಟಿ ನೀಡಿ ಸಹಿ ಸಂಗ್ರಹ ಅಭಿಯಾನ ಮಾಡಬೇಕು ಎಂದರು.- - -
-20ಎಚ್.ಎಲ್.ಐ1.ಜೆಪಿಜಿ:ಹೊನ್ನಾಳಿಯಲ್ಲಿ ಬಿಜೆಪಿಯಿಂದ ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಶಾಸಕ ಡಿ.ಜಿ.ಶಾಂತನಗೌಡ, ಎಚ್.ಎ. ಉಮಾಪತಿ ಇನ್ನಿತರರು ಪಾಲ್ಗೊಂಡರು.