ನರೇಂದ್ರ ಮೋದಿ ಸಂವಿಧಾನ ಗೌರವಿಸಿದ್ದಾರೆ ಹೊರತು ಕಡೆಗಣಿಸಿಲ್ಲ: ಕಾಳಯ್ಯ

| Published : Apr 23 2024, 12:51 AM IST

ನರೇಂದ್ರ ಮೋದಿ ಸಂವಿಧಾನ ಗೌರವಿಸಿದ್ದಾರೆ ಹೊರತು ಕಡೆಗಣಿಸಿಲ್ಲ: ಕಾಳಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿ ಅನ್ನದಾತರಾಗಿದ್ದಾರೆ. ಮಂಡ್ಯ ಜಿಲ್ಲೆ ಹಾಗೂ ಕಾವೇರಿ ಉಳಿಯಬೇಕಾದರೆ ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು. ಕುಮಾರಸ್ವಾಮಿ ಚುನಾವಣೆಯಲ್ಲಿ ಗೆಲ್ಲುವುದು ಖಚಿತ. ಕೇಂದ್ರದಲ್ಲಿ ಮಂತ್ರಿಯಾಗಿ ಮಂಡ್ಯಜಿಲ್ಲೆಯನ್ನು ಅಭಿವೃದ್ಧಿ ಪಡಿಸುತ್ತಾರೆ. ದಲಿತ ಸಮುದಾಯದವರು ಮೈತ್ರಿ ಅಭ್ಯರ್ಥಿಗೆ ಮತ ನೀಡಬೇಕು.

ಕನ್ನಡಪ್ರಭ ವಾರ್ತೆ ಭಾರತೀನಗರ

ಪ್ರಧಾನಿ ನರೇಂದ್ರ ಮೋದಿ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಗೌರವಿಸಿದ್ದಾರೆಯೇ ಹೊರತು ಕಡೆಗಣಿಸಿಲ್ಲ ಎಂದು ಎಸ್‌ಸಿಎಸ್‌ಟಿ ಘಟಕದ ತಾಲೂಕು ಅಧ್ಯಕ್ಷ ಕಾಳಯ್ಯ ತಿಳಿಸಿದರು.

ಮಣಿಗೆರೆ ಗ್ರಾಮದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ಪ್ರಚಾರದ ವೇಳೆ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್‌ಗೆ ಕಾಂಗ್ರೆಸ್ ಪಕ್ಷ ಅಪಮಾನ ಮಾಡಿದಷ್ಟು ಇನ್ಯಾವುದೇ ಅನ್ಯ ಪಕ್ಷಗಳು ಅಪಮಾನ ಮಾಡಿಲ್ಲ ಎಂಬುದನ್ನು ಸಮುದಾಯದವರು ಅರ್ಥ ಮಾಡಿಕೊಳ್ಳಬೇಕು ಎಂದರು.

ಕಾಂಗ್ರೆಸ್ ದಲಿತ ಸಮುದಾಯವನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಚುನಾವಣೆ ವೇಳೆ ಅಂಬೇಡ್ಕರ್ ಹೆಸರು ಮುಂದಿಟ್ಟುಕೊಂಡು ದಲಿತರ ಮತ ಪಡೆಯಲು ಮುಂದಾಗಿರುವುದು ನಾಚಿಕೆ ತರುವಂತಹ ವಿಚಾರವಾಗಿದೆ ಎಂದು ಕಿಡಿಕಾರಿದರು.

ದಲಿತ ಮುಖಂಡ ವೆಂಕಟಚಲಯ್ಯ ಮಾತನಾಡಿ, ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿ ಅನ್ನದಾತರಾಗಿದ್ದಾರೆ. ಮಂಡ್ಯ ಜಿಲ್ಲೆ ಹಾಗೂ ಕಾವೇರಿ ಉಳಿಯಬೇಕಾದರೆ ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು ಎಂದು ಕೋರಿದರು.

ಪುರಸಭೆ ಮಾಜಿ ಅಧ್ಯಕ್ಷ ಸುರೇಶ್ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಚುನಾವಣೆಯಲ್ಲಿ ಗೆಲ್ಲುವುದು ಖಚಿತ. ಕೇಂದ್ರದಲ್ಲಿ ಮಂತ್ರಿಯಾಗಿ ಮಂಡ್ಯಜಿಲ್ಲೆಯನ್ನು ಅಭಿವೃದ್ಧಿ ಪಡಿಸುತ್ತಾರೆ. ದಲಿತ ಸಮುದಾಯದವರು ಮೈತ್ರಿ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಸಿ.ಮಹೇಂದ್ರ, ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ಕರಡಕೆರೆ ಯೋಗೇಶ್, ಮುಖಂಡರಾದ ಬಸವರಾಜು, ಮಣಿಗೆರೆ ಪವನ, ರಾಮಕೃಷ್ಣ, ಚಂದ್ರಶೇಖರ್, ಮಂಜುನಾಥ್, ಅಣ್ಣೂರು ಶಶಿಕುಮಾರ್, ಚಿಕ್ಕಣ್ಣ ಸೇರಿದಂತೆ ಹಲವರಿದ್ದರು.ಎಚ್‌ಡಿಕೆ ಗೆಲುವಿನಿಂದ ನೀರಾವರಿ ಅನ್ಯಾಯಗಳಿಗೆ ನ್ಯಾಯ

ಕನ್ನಡಪ್ರಭ ವಾರ್ತೆ ಮಂಡ್ಯರಾಜ್ಯದ ನೀರಾವರಿ ವಿಚಾರಗಳಿಗೆ ನ್ಯಾಯ ಸಿಗಬೇಕಾದರೆ ಸಮರ್ಥ ನಾಯಕನ ಆಯ್ಕೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡುವುದು ಸೂಕ್ತ ಎಂದು ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೃಷ್ಣೇಗೌಡ ಅಭಿಪ್ರಾಯಿಸಿದರು.

ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಪಾದಯಾತ್ರೆ ಮಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ ಪ್ರದೇಶದಲ್ಲಿ ೮೦ ಎಕರೆ ಅರಣ್ಯ ಒತ್ತುವರಿ ಮಾಡಿಕೊಂಡು ರೆಸಾರ್ಟ್ ಮಾಡಲು ಮುಂದಾಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.ನಾವು ಈವರೆವಿಗೂ ಯಾವುದೇ ಪಕ್ಷವನ್ನೂ ಬೆಂಬಲಿಸಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ರೈತರ ಸಾಲಮನ್ನಾ ಮಾಡಿದ್ದರು. ರೈತರ ಬಗ್ಗೆ ಕಾಳಜಿ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ನಾವು ಪಕ್ಷಾತೀತವಾಗಿ ಬೆಂಬಲಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಒಂದು ವೇಳೆ ಕುಮಾರಸ್ವಾಮಿ ಆಯ್ಕೆಯಾದ ನಂತರ ಈ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿದಲ್ಲಿ ಆಗ ನಾವು ಖಂಡಿತಾ ಅವರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಬೆಂಗಳೂರಿನಲ್ಲಿರುವ ಕನ್ನಡಿಗರನ್ನು ಒಕ್ಕಲೆಬ್ಬಿಸಿ ಮಾಗಡಿ ಸೇರಿದಂತೆ ಬೆಂಗಳೂರು ಸುತ್ತಮುತ್ತಲ ಪ್ರದೇಶಗಳಿಗೆ ಸ್ಥಳಾಂತರವಾಗುತ್ತಿದ್ದಾರೆ. ಇದೊಂದು ಮಾಫಿಯಾ ರೀತಿಯಲ್ಲಿ ನಡೆಯುತ್ತಿದೆ. ಈಗಾಗಲೇ ನಾವು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕಾವೇರಿ ವಿಚಾರದಲ್ಲಿ ಮತ್ತಷ್ಟು ಹೋರಾಟ ಮುಂದುವರಿಸುತ್ತೇವೆ ಎಂದರು.

ವಿವಿಧ ಕನ್ನಡ ಸಂಘಟನೆಗಳ ಮುಖಂಡರಾದ ಲೋಕೇಶ್‌ಗೌಡ, ನರಸಿಂಹಮೂರ್ತಿ, ನಾರಾಯಣ್, ವಿನೋದ್‌ಗೌಡ, ಶೋಭ ಇತರರಿದ್ದರು.