ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ : ರೂಪಾಲಿ ನಾಯ್ಕ

| Published : May 26 2024, 01:41 AM IST / Updated: May 26 2024, 12:52 PM IST

ಸಾರಾಂಶ

ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸತತವಾಗಿ ಅವಿಶ್ರಾಂತವಾಗಿ ದುಡಿದಿದ್ದಾರೆ. ಪಕ್ಷಕ್ಕಾಗಿ ನೀವು ನೀಡಿದ ಅವಿಶ್ರಾಂತ ಸೇವೆಗೆ ಗೆಲುವಿಗೆ ನಾಂದಿಯಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.

 ಅಂಕೋಲಾ :  ತಾಲೂಕಿನ ಒಕ್ಕಲಿಗರ ಸಭಾಭವನದಲ್ಲಿ ಶನಿವಾರ ಬಿಜೆಪಿ ಅವಲೋಕನಾ ಸಭೆ ಯಶಸ್ವಿಯಾಗಿ ನಡೆಯಿತು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮಾತನಾಡಿ, ವಿಶ್ವ ಮಾನವ ನರೇಂದ್ರ ಮೋದಿಜೀ ಅವರು ಮೂರನೇ ಭಾರಿ ಪ್ರಧಾನಿ ಆಗಲೆಂದು ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸತತವಾಗಿ ಅವಿಶ್ರಾಂತವಾಗಿ ದುಡಿದಿದ್ದಾರೆ. ಪಕ್ಷಕ್ಕಾಗಿ ನೀವು ನೀಡಿದ ಅವಿಶ್ರಾಂತ ಸೇವೆಗೆ ಗೆಲುವಿಗೆ ನಾಂದಿಯಾಗಲಿದೆ ಎಂದರು.

ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಬಿಜೆಪಿಯನ್ನು ಆಡಳಿತಕ್ಕೆ ತರಲು ಅಂಕೋಲಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಪ್ರಮುಖರು ತಮಗೆ ನೀಡಿದ ಸವಾಲನ್ನು ಗುರಿ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಕೋಲಾದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರು ಚುನಾವಣೆಯಲ್ಲಿ ಹಗಲಿರುಳು ಶ್ರಮಿಸಿ ಹೆಚ್ಚಿನ ಪ್ರಮಾಣದಲ್ಲಿ ಮತದಾರರಿಂದ ಮತದಾನ ಮಾಡಿಸಿದ್ದು, ಈ ನಿಮ್ಮ ಸಹಕಾರಕ್ಕೆ ನಾನು ಸದಾ ಚಿರಋಣಿ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿದರು. ಈ ಸಂದರ್ಭದಲ್ಲಿ ಅಂಕೋಲಾ ಮಂಡಲದ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ನಿಕಟಪೂರ್ವ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಲೋಕಸಭಾ ಚುನಾವಣೆ ಕ್ಷೇತ್ರದ ಸಂಚಾಲಕರಾದ ಗೋವಿಂದ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ್, ಬಿಜೆಪಿ ಜಿಲ್ಲಾ ಮುಖಂಡರಾದ ರಾಜೇಂದ್ರ ನಾಯ್ಕ, ಸಂಜಯ ನಾಯ್ಕ, ಆರತಿ ಗೌಡ, ನಂದು ಗಾಂವಕರ, ಜಗದೀಶ ನಾಯಕ ಮೊಗಟಾ, ಸುಬ್ರಾಯ ದೇವಾಡಿಗ ಹಾಗೂ ಜಿಲ್ಲಾ ಪ್ರಮುಖರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.